ದೆಹಲಿ ಹಿಂಸಾಚಾರಕ್ಕೆ ಎಎಪಿ-ಕಾಂಗ್ರೆಸ್ ನಾಯಕರ ಹೇಳಿಕೆ ಕಾರಣ: ಬಿಜೆಪಿ ಆರೋಪ
ಕಾಂಗ್ರೆಸ್ ಮತ್ತು ಎಎಪಿ, ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರವನ್ನು "ರಾಜಕೀಯಗೊಳಿಸುತ್ತಿವೆ" ಎಂದು ಗುರುವಾರ ಆರೋಪಿಸಿರುವ ಬಿಜೆಪಿ, ಈ ಹಿಂಸಾತ್ಮಕ ಘರ್ಷಣೆಗೆ ಉಭಯ ಪಕ್ಷಗಳ ನಾಯಕರ ಪ್ರಚೋದನಕಾರಿ ಹೇಳಿಕೆಗಳೇ ಕಾರಣವೆಂದು ಆರೋಪಿಸಿದೆ.

ನವದೆಹಲಿ: ಕಾಂಗ್ರೆಸ್ ಮತ್ತು ಎಎಪಿ, ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರವನ್ನು "ರಾಜಕೀಯಗೊಳಿಸುತ್ತಿವೆ" ಎಂದು ಗುರುವಾರ ಆರೋಪಿಸಿರುವ ಬಿಜೆಪಿ, ಈ ಹಿಂಸಾತ್ಮಕ ಘರ್ಷಣೆಗೆ ಉಭಯ ಪಕ್ಷಗಳ ನಾಯಕರ ಪ್ರಚೋದನಕಾರಿ ಹೇಳಿಕೆಗಳೇ ಕಾರಣವೆಂದು ಆರೋಪಿಸಿದೆ.
ಇಂದಿಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಪ್ರಕಾಶ್ ಜಾವಡೇಕರ್, ದೆಹಲಿ ಹಿಂಸಾಚಾರವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ. ಎಎಪಿ ಈ ವಿಷಯವನ್ನು ಕೋಮುವಾದೀಕರಿಸಿದೆ ಎಂದು ಆರೋಪಿಸಿದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.
ದೆಹಲಿಯಲ್ಲಿನ ಹಿಂಸಾಚಾರಕ್ಕೆ ಸದ್ಯ 37 ಮಂದಿ ಬಲಿಯಾಗಿದ್ದಾರೆ. ಪ್ರಸ್ತುತ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಹೆಚ್ಚುವರಿ ಪೊಲೀಸ್ ತುಕಡಿ ಮತ್ತು ಭದ್ರತಾ ಪಡೆಯನ್ನು ನಿಯೋಜಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


