ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 39ಕ್ಕೆ ಏರಿಕೆ, ಹೆಚ್ಚುವರಿ ಪಡೆಗಳ ನಿಯೋಜನೆಗೆ ಕೇಂದ್ರ ಸಿದ್ದ!
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ದೆಹಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39ಕ್ಕೆ ಏರಿಕೆಯಾದಂತಾಗಿದೆ.
ಪ್ರಸ್ತುತ ದೆಹಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ ಮರಳುತ್ತಿವೆ. ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸರಿ ಸುಮಾರು 7000ಕ್ಕೂ ಅಧಿಕ ಪ್ಯಾರಾಮಿಲಿಟರಿ ಪಡೆಗಳು ಭದ್ರತೆಗೆ ನಿಯೋಜಿಸಲಾಗಿದೆ.
ಅಲ್ಲದೆ ನೂರಾರು ಪೊಲೀಸರು ಹಿಂಸಾಚಾರಕ್ಕೆ ತುತ್ತಾಗಿದ್ದ ಈಶಾನ್ಯ ದೆಹಲಿಯ ಜಾಫ್ರಾಬಾದ್, ಮೌಜ್‌ಪುರ, ಚಂದ್ ಬಾಗ್, ಖುರೇಜಿ ಖಾಸ್ ಮತ್ತು ಭಜನ್‌ಪುರ್ ನಲ್ಲಿ ಮೊಕ್ಕಾಂ ಹೂಡಿದ್ದು, ಶಾಂತಿ ಸುವ್ಯವಸ್ಥೆಯ ಪಾಲನೆಯಲ್ಲಿ ತೊಡಗಿದ್ದಾರೆ.
Related Article
ದೆಹಲಿ ನೂತನ ಪೊಲೀಸ್ ಆಯುಕ್ತರಾಗಿ ಎಸ್ ಎನ್ ಶ್ರೀವಾಸ್ತವ ನೇಮಕ
ಅಮೆರಿಕ ಚುನಾವಣೆಯಲ್ಲೂ ಹಸ್ತಕ್ಷೇಪ: ಬರ್ನಿ ಸ್ಯಾಂಡರ್ಸ್ ಗೆ ಬಿಎಲ್ ಸಂತೋಷ್ ಹೇಳಿದ್ದೇನು?
ಗುಪ್ತಚರ ಇಲಾಖೆ ಸಿಬ್ಬಂದಿ ಸಾವು: ಆಪ್ ಮುಖಂಡನ ವಿರುದ್ಧ ಎಫ್ ಐಆರ್
ದೆಹಲಿ ಹೊತ್ತಿ ಉರಿಯುವಾಗ ಅಮಿತ್ ಶಾ ಎಲ್ಲಿದ್ದರು?: ಶಿವಸೇನೆ ಪ್ರಶ್ನೆ
ದೆಹಲಿ ಗಲಭೆ: ಹಲವು ಬಾರಿ ಚೂರಿ ಇರಿತದಿಂದ ಐಬಿ ಅಧಿಕಾರಿ ಸಾವು- ಮರಣೋತ್ತರ ಪರೀಕ್ಷೆ ವರದಿ
ಗುಪ್ತಚರ ಅಧಿಕಾರಿ ಕೊಲೆ ಆರೋಪ: ಕಾರ್ಪೊರೇಟರ್ ತಾಹಿರ್ ಪಕ್ಷದಿಂದ ಅಮಾನತು ಮಾಡಿದ ಎಎಪಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


