ದೇಶ

ಕುಟುಂಬ ಕಲಹ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಉತ್ತರ ಪ್ರದೇಶದ ಸಾಹಿಬಾಬಾದ್ ಜಿಲ್ಲೆಯ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಥಲಾ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಕುಟುಂಬ ಕಲಹ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು
ಸಂಗ್ರಹ ಚಿತ್ರ
Published On :

ಗಾಜಿಯಾಬಾದ್: ಉತ್ತರ ಪ್ರದೇಶದ ಸಾಹಿಬಾಬಾದ್ ಜಿಲ್ಲೆಯ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಥಲಾ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸ್ ಅಧೀಕ್ಷಕ (ನಗರ) ಮನೀಶ್ ಮಿಶ್ರಾ, ಘಟನೆಯನ್ನು ದೃಢೀಕರಿಸಿದ್ದಾರೆ. ಅರ್ಥಲಾ ಪ್ರದೇಶದ ಸಂಜಯ್ ನಗರ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ಯಾರೋ ಆತ್ಮಹತ್ಯೆ ಮಾಡಿಕೊಂಡಿರುವಾಗಿ ಮಾಹಿತಿ ಸಿಕ್ಕಿತು. ಮಾಹಿತಿಯ ಮೇರೆಗೆ ಪೊಲೀಸರು ಮನೆ ಬಳಿ ಹೋಗಿದ್ದಾರೆ ಮನೆ ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಮನೆ ಯಜಮಾನ ಧೀರಜ್ ತ್ಯಾಗಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರ ಪತ್ನಿ ಮತ್ತು ಇಬ್ಬರು ಮಕ್ಕಳ ಶವಗಳನ್ನು ಮತ್ತೊಂದು ಕೋಣೆಯಿಂದ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣವು ಕುಟುಂಬ ಕಲಹದಿಂದ ಆಗಿರಬಹುದೆಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಲಭ್ಯವಾಗಿಲ್ಲ. ಒಂದು ಕೋಣೆಯ ಗೋಡೆಯ ಮೇಲೆ ಮಾತ್ರ ಬರೆಯಲಾಗಿದೆ. ಮೃತರನ್ನು ಧೀರಜ್ ತ್ಯಾಗಿ, ಅವರ ಪತ್ನಿ ಕಾಜಲ್, ಮಗಳು ಏಕ್ತಾ ಮತ್ತು ಮಗ ಧ್ರುವ್ ಎಂದು ಗುರುತಿಸಲಾಗಿದೆ.

ಧೀರಜ್ ತ್ಯಾಗಿ ಮೊದಲು ಪತ್ನಿ ಮತ್ತು ಮಕ್ಕಳಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಧೀರಜ್ ತ್ಯಾಗಿ ಮೂಲತಃ ಬಿಜ್ನೋರ್ ಜಿಲ್ಲೆಯ ನಯ ಗಾಂವ್ ಮೂಲದವರು ಎಂದು ತಿಳಿಸಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.