ದೆಹಲಿ ಹಿಂಸಾಚಾರದ ವೇಳೆ ಸಾರ್ವಜನಿಕ ಆಸ್ತಿ ನಷ್ಟ; ಗಲಭೆಕೋರರಿಂದಲೇ ವಸೂಲಿ!
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮಾದರಿಯಂತೆಯೇ ಇದೀಗ ದೆಹಲಿಯಲ್ಲೂ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ದೆಹಲಿ ಪೊಲೀಸರು ಸಿದ್ಧತೆಯಲ್ಲಿ ತೊಡಗಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮಾದರಿಯಂತೆಯೇ ಇದೀಗ ದೆಹಲಿಯಲ್ಲೂ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ದೆಹಲಿ ಪೊಲೀಸರು ಸಿದ್ಧತೆಯಲ್ಲಿ ತೊಡಗಿದ್ದಾರೆ.
ಹೌದು.. ದೆಹಲಿಯಲ್ಲಿ ನಡೆದ ಸಿಎಎ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದಲ್ಲಿ ಸಂಭವಿಸಿದ ಅಪಾರ ಪ್ರಮಾಣದ ನಷ್ಟವನ್ನು ಗಲಭೆಕೋರರಿಂದಲೇ ಭರಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ. ಗಲಭೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಮಾತ್ರವಲ್ಲದೇ ಅವರಿಂದ ದಂಡ ವಸೂಲಿಗೂ ದೆಹಲಿ ಪೊಲೀಸ್ ಇಲಾಖೆ ಚಿಂತನೆಯಲ್ಲಿ ತೊಡಗಿದೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲೂ ಸಹ ಚಿಂತಿಸಲಾಗುತ್ತಿದೆ.
ಈ ಸಂಬಂಧ ದೆಹಲಿ ಕ್ರೈಮ್ ಬ್ರಾಂಚ್ ಗೆ ಈಗಗಾಲೇ ದೆಹಲಿ ಪೊಲೀಸ್ ಆಯುಕ್ತರ ಕಚೇರಿಯಿಂದ ನಿರ್ದೇಶನ ತೆರಳಿದೆ ಎಂದು ಹೇಳಲಾಗುತ್ತಿದ್ದು, ಕ್ರೈಮ್ ಬ್ರಾಂಚ್ ನ ವಿಶೇಷ ತನಿಖಾದಳದ ಸಿಬ್ಬಂದಿ ಈ ಕುರಿತು ತನಿಖೆ ನಡೆಸಿ ಗಲಭೆ ಕೋರರ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಪೊಲೀಸ್ ಇಲಾಖೆ ಈವರೆಗೂ ಸುಮಾರು 1 ಸಾವಿರಕ್ಕೂ ಅಧಿಕ ಗಲಭೆಕೋರರನ್ನು ಗುರುತಿಸಿ ಪಟ್ಟಿ ಸಿದ್ಧ ಮಾಡಿದೆ. ಈ ಪೈಕಿ 630 ಮಂದಿಯನ್ನು ವಶಕ್ಕೆ ಪಡೆದಿದೆ.
ಅಂತೆಯೇ ಈ ಸಂಬಂಧ ದೆಹಲಿ ನಾಗರಿಕ ಅಧಿಕಾರಿಗಳು ಮತ್ತು ದೆಹಲಿ ಸರ್ಕಾರದೊಂದಿಗೆ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
Related Article
ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಅರೆಸೇನಾಪಡೆ ನಿಯೋಜನೆ, ಸಹಜಸ್ಥಿತಿಯತ್ತ ರಾಷ್ಟ್ರ ರಾಜಧಾನಿ
ದೆಹಲಿ ಹಿಂಸಾಚಾರ: ದ್ವೇಷ ಪೂರಿತ ಭಾಷಣ; ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್
ದ್ವೇಷ ಭಾಷಣ ಆರೋಪ ಮೇಲೆ ರಾಹುಲ್, ಸೋನಿಯಾ ವಿರುದ್ಧ ಎಫ್ಐಆರ್ ಕೋರಿ ಅರ್ಜಿ: ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ದೆಹಲಿ ನೂತನ ಪೊಲೀಸ್ ಆಯುಕ್ತರಾಗಿ ಎಸ್ ಎನ್ ಶ್ರೀವಾಸ್ತವ ನೇಮಕ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


