ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ: ರವಿಶಂಕರ್ ಪ್ರಸಾದ್
ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ. ಹಾಗೆಯೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ನಿರ್ಣಯ ತೆಗೆದುಕೊಂಡವರು ಸೂಕ್ತ ಕಾನೂನು ಅಭಿಪ್ರಾಯ ಪಡೆಯಬೇಕು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ: ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ. ಹಾಗೆಯೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ನಿರ್ಣಯ ತೆಗೆದುಕೊಂಡವರು ಸೂಕ್ತ ಕಾನೂನು ಅಭಿಪ್ರಾಯ ಪಡೆಯಬೇಕು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದವರು "ಅಸಂವಿಧಾನಿಕ" ಹೇಳಿಕೆಗಳನ್ನು ನೀಡುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಅವರು ಹೇಳಿದರು.
ಪೌರತ್ವ ತಿದ್ದುಪಡಿ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದ ಒಂದು ದಿನದ ನಂತರ ಕೇಂದ್ರ ಸಚಿವರ ಹೇಳಿಕೆ ಬಂದಿದೆ.
ಸಿಎಎಗೆ ಅವಕಾಶ ನೀಡುವುದಿಲ್ಲ ಅಥವಾ ಅದನ್ನು ಜಾರಿಗೊಳಿಸುವುದರ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುತ್ತಿದ್ದೇವೆ ಎಂದು ಹೇಳುವ ಸರ್ಕಾರವು ಸಾಂವಿಧಾನಿಕ ನಿಬಂಧನೆಗಳ ಬಗ್ಗೆ ಸೂಕ್ತವಾದ ಕಾನೂನು ಅಭಿಪ್ರಾಯವನ್ನು ಪಡೆಯಬೇಕು ಎಂದು ಪ್ರಸಾದ್ ಹೇಳಿದ್ದಾರೆ.
ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ಜಾರಿಗೆ ತರುವುದು ರಾಜ್ಯಗಳ ಸಾಂವಿಧಾನಿಕ ಕರ್ತವ್ಯ ಎಂದು ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.
ಪೌರತ್ವ ಒಳಗೊಂಡಂತೆ ಕೇಂದ್ರ ಪಟ್ಟಿಯಡಿ ಬರುವ ವಿಷಯಗಳ ಬಗೆಗೆ ಸಂಸತ್ತು ಕಾನೂನುಗಳನ್ನು ರೂಪಿಸಬಹುದು ಸಂಸತ್ತು ಅಂಗೀಕರಿಸಿದ ಕಾನೂನುಗಳನ್ನು ರಾಜ್ಯಗಳು ವಿರೋಧಿಸುವಂತಿಲ್ಲ. ಇದಕ್ಕೆ ಸಂವಿಧಾನದ 245 ನೇ ವಿಧಿಯ ಎರಡನೇ ನಿಯಮ ಸ್ಪಷ್ಟ ನಿದರ್ಶನವಾಗಿದೆ ಎಂದ ಸಚಿವರು " ಸಂವಿಧಾನದ 245 ನೇ ವಿಧಿಯ ಎರಡನೇ ನಿಯಮ ಹೇಳುವಂತೆ ಸಂಸತ್ತು ರಚಿಸಿದ ಯಾವುದೇ ಕಾನೂನು ಅಮಾನ್ಯವೆಂದು ಪರಿಗಣಿಸಲು ಬರುವುದಿಲ್ಲ. , ಏಕೆಂದರೆ ಅದು ಪ್ರಾದೇಶಿಕ ಮಾನ್ಯತೆಯನ್ನು ಒಳಗೊಂಡಿರುತ್ತದೆ" ಎಂದರು.
ಇನ್ನು ಕೇರಳವಲ್ಲದೆ ಪಶ್ಚಿಮ ಬಂಗಾಳ, ಬಿಹಾರ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳು ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿಕೆ ನಿಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


