ಪಿಒಕೆ ಗುರಿಯಾಗಿಸಿ ದಾಳಿ ಮಾಡಲು ಸಿದ್ಧ.. ಆದರೆ: ಸೇನಾ ಮುಖ್ಯಸ್ಥ ನರಾವಣೆ
ಆದೇಶ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಸೇನೆ ಸಿದ್ದವಾಗಿದೆ ಎಂದು ನೂತನ ಸೇನಾ ಮುಖ್ಯಸ್ಥ ಎಂಎಂ ನರಾವಣೆ ಹೇಳಿದ್ದಾರೆ.

ನವದೆಹಲಿ: ಆದೇಶ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಸೇನೆ ಸಿದ್ದವಾಗಿದೆ ಎಂದು ನೂತನ ಸೇನಾ ಮುಖ್ಯಸ್ಥ ಎಂಎಂ ನರಾವಣೆ ಹೇಳಿದ್ದಾರೆ.
ಮಾಧ್ಯಮವೊಂದರೊಂದಿಗೆ ಮಾತನಾಡಿದ ನರಾವಣೆ ಅವರು, ಆದೇಶ ನೀಡಿದರೆ ಯಾವುದೇ ಕ್ಷಣದಲ್ಲೂ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಲು ಸೇನೆ ಸಿದ್ಧವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕ್ರಮ ಕೈಗೊಳ್ಳಲು ನಮ್ಮಲ್ಲಿ ವಿವಿಧ ಉಪಾಯಗಳಿವೆ. ಅಲ್ಲದೆ ನಾವು ಎಲ್ಲದಕ್ಕೂ ತಯಾರಿದ್ದೇವೆ ಎಂದು ಹೇಳಿದರು.
'ನಮ್ಮ ಸೇನಾ ಪಡೆಗಳನ್ನು ಜಮ್ಮು ಮತ್ತು ಕಾಶ್ಮೀರ ಸೇರಿ ಗಡಿಯಲ್ಲಿ ಈಗಾಗಲೇ ನಿಯೋಜಿಸಲಾಗಿದೆ. ಅಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ನಮ್ಮಲ್ಲಿ ವಿವಿಧ ಯೋಜನೆಗಳಿವೆ. ಅಗತ್ಯವಿದ್ದರೆ, ಆ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು. ನಾವು ಮಾಡಬೇಕಾದ ಯಾವುದೇ ಕೆಲಸವನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತೇವೆ. ಪರಿಸ್ಥಿತಿ ಬಂದರೆ ಭಯೋತ್ಪಾದನೆ ವಿರುದ್ಧ ಎಂತಹ ನೀತಿ ಅನುಸರಿಸಲೂ ನಾವು ಸಿದ್ಧ. ಆದರೆ ಸದ್ಯಕ್ಕೆ, ಆಕ್ರಮಣಗಳು ಅಥವಾ ಒಳನುಸುಳುವಿಕೆಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದ ನರಾವಣೆ, ನಾವು ವಿವಿಧ ಪ್ರದೇಶಗಳಲ್ಲಿ ಮತ್ತು ಸಂಕಷ್ಟದ ಪರಿಸ್ಥಿತಿಗಳಲ್ಲಿ ಹೆಚ್ಚಿನ ಜಾಗರೂಕರಾಗಿರಬೇಕು. ಇದು ನಮಗೆ ನಿಜವಾದ ಚಾಲೆಂಜ್ ಎಂದು ನರಾವಣೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


