ದೇಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ

ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ ಖಾಸಗಿ ವೈದ್ಯ ಡಾ.ಹರ್ಜಿತ್ ಸಿಂಗ್ ಭಟ್ಟಿ ಕಳವಳವ್ಯಕ್ತಪಡಿಸಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ
Published On :

ನವದೆಹಲಿ: ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ  ಖಾಸಗಿ  ವೈದ್ಯ ಡಾ.ಹರ್ಜಿತ್ ಸಿಂಗ್ ಭಟ್ಟಿ  ಕಳವಳವ್ಯಕ್ತಪಡಿಸಿದ್ದಾರೆ.
 
ಚಿಕಿತ್ಸೆಗಾಗಿ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ-ಏಮ್ಸ್ ಗೆ ದಾಖಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ಈ ಸಂಬಂಧ ಡಾ.ಹರ್ಜಿತ್ ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ. 

ಅಪರೂಪದ ರೋಗದಿಂದ ಬಳಲುತ್ತಿರುವ ಚಂದ್ರಶೇಖರ್ ಆಜಾದ್ ಅವರು ಪ್ರತಿ ಎರಡು ವಾರಗಳಿಗೊಮ್ಮೆ ’ಫ್ಲೆಬೋಟಮಿ’(ದೇಹದಿಂದ ರಕ್ತ ತೆಗೆಯುವುದು) ಚಿಕಿತ್ಸೆಗೆ ಒಳಗಾಗಬೇಕಿತ್ತು. ಈ ಸಂಬಂಧ ಅವರು ಕಳೆದ ಒಂದು ವರ್ಷದಿಂದ ಏಮ್ಸ್ ನ ಹೆಮಟಾಲಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ ಹರ್ಜಿತ್ ಸಿಂಗ್ ಭಟ್ಟಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.