ದೇಶ

ಸಿಎಎ ವಿರೋಧಿಸಿ ದೇಶವ್ಯಾಪಿ ಯಾತ್ರೆ : ಯಶವಂತ ಸಿನ್ಹಾ

ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ 'ಯಾತ್ರೆ' ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಶನಿವಾರ ಘೋಷಿಸಿದ್ದಾರೆ.

ಸಿಎಎ ವಿರೋಧಿಸಿ ದೇಶವ್ಯಾಪಿ ಯಾತ್ರೆ : ಯಶವಂತ ಸಿನ್ಹಾ
ಯಶವಂತ್ ಸಿನ್ಹಾ
Published On :

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ 'ಯಾತ್ರೆ' ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಶನಿವಾರ ಘೋಷಿಸಿದ್ದಾರೆ.

ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು 'ಗಾಂಧಿ ಶಾಂತಿ ಯಾತ್ರೆ' ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜನವರಿ 9ರಂದು ಮುಂಬೈನ ಅಪೋಲೋ ಬಂದರ್ ನಿಂದ ಯಾತ್ರೆ ಆರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಮೂಲಕ ದೆಹಲಿಯಲ್ಲಿ ಅಂತ್ಯಗೊಳ್ಳಲಿದೆ ಎಂದು ಸಿನ್ಹಾ ತಿಳಿಸಿದ್ದಾರೆ.

ಸುಮಾರು 3000 ಕಿ. ಮೀ. ಸಾಗಲಿರುವ ಈ ಯಾತ್ರೆ ಜನವರಿ 30ರಂದು ದೆಹಲಿಯ ರಾಜ್ ಘಾಟ್ ಬಳಿ ಸಮಾಪ್ತಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಶತ್ರುಘ್ನ ಸಿನ್ಹಾ ಹಾಗೂ ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹ್ತಾ ಅವರು ಸಹ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.