ದೇಶ

ಸಿಎಎ ಅಭಿಯಾನ: ವಿವಿಧ ಕ್ಷೇತ್ರಗಳ ಖ್ಯಾತನಾಮರನ್ನು ತಲುಪಲು ಬಿಜೆಪಿ ಕಾರ್ಯಕ್ರಮ

ಹೊಸದಾಗಿ ಜಾರಿಗೆ ತಂದಿರುವ ಪೌರತ್ವ ಕಾನೂನಿನ ನೈಜ ಅಂಶಗಳು ಮತ್ತು ಅದರ ಉದ್ದೇಶವನ್ನು ಜನರಿಗೆ ತಲುಪಿಸುವ ಬೃಹತ್ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಬಿಜೆಪಿ, ಖ್ಯಾತನಾಮರು, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕøತಿ ವಲಯದ ಹೆಸರಾಂತರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಸಿಎಎ ಅಭಿಯಾನ: ವಿವಿಧ ಕ್ಷೇತ್ರಗಳ ಖ್ಯಾತನಾಮರನ್ನು ತಲುಪಲು ಬಿಜೆಪಿ ಕಾರ್ಯಕ್ರಮ
Published On :

ನವದೆಹಲಿ:ಹೊಸದಾಗಿ ಜಾರಿಗೆ ತಂದಿರುವ ಪೌರತ್ವ ಕಾನೂನಿನ ನೈಜ ಅಂಶಗಳು ಮತ್ತು ಅದರ ಉದ್ದೇಶವನ್ನು ಜನರಿಗೆ ತಲುಪಿಸುವ ಬೃಹತ್ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಬಿಜೆಪಿ, ಖ್ಯಾತನಾಮರು, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕøತಿ ವಲಯದ ಹೆಸರಾಂತರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.


ಈ ಕಾರ್ಯಕ್ರಮದ ನೇತೃತ್ವವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ವಹಿಸಲಿದ್ದು, ಇವರಿಗೆ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ಪಕ್ಷದ ಇತರ ನಾಯಕರು ಜೊತೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


‘ಕ್ರೀಡೆ ಮತ್ತು ಸಂಸ್ಕøತಿ ವಲಯದವರೊಂದಿಗೆ ವೈಯಕ್ತಿಕವಾಗಿ ಸಂಪರ್ಕಿಸಿ, ಸಿಎಎ ನ ನಿಜವಾದ ಉದ್ದೇಶವನ್ನು ತಿಳಿಸಲಾಗುವುದು. ಈ ಕಾನೂನು ಭಾರತದ ಯಾವುದೇ ಪ್ರಜೆಗಳ ವಿರುದ್ಧವಾಗಿಲ್ಲ ಎಂಬುದನ್ನು ಮನದಟ್ಟು ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.