ದೇಶ

ಎನ್ಆರ್'ಸಿ ಜಾರಿಗೆ ತರುತ್ತೀರೋ, ಇಲ್ಲವೋ? ಸ್ಪಷ್ಟಪಡಿಸಿ: ಬಿಜೆಪಿಗೆ ಕಾಂಗ್ರೆಸ್

ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶದಾದ್ಯಂತ ಜಾರಿಗೆ ತರುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಆಗ್ರಹಿಸಿದ್ದಾರೆ.

ಎನ್ಆರ್'ಸಿ ಜಾರಿಗೆ ತರುತ್ತೀರೋ, ಇಲ್ಲವೋ? ಸ್ಪಷ್ಟಪಡಿಸಿ: ಬಿಜೆಪಿಗೆ ಕಾಂಗ್ರೆಸ್
ದಿಗ್ವಿಜಯ್ ಸಿಂಗ್
Published On :

ಇಂದೋರ್: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶದಾದ್ಯಂತ ಜಾರಿಗೆ ತರುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ಆರ್'ಸಿ ಬಗ್ಗೆ ನಮಗೆ ಸ್ಪಷ್ಟನೆ ಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ, ಜೆಡಿ ನಡ್ಡಾ ಅವರ ಹೇಳಿಕೆಗಳು ವಿಭಿನ್ನವಾಗಿದ್ದು, ದೇಶದಾದ್ಯಂತ ಎನ್ಆರ್'ಸಿ ಜಾರಿಗೆ ತರಲಾಗುತ್ತಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ನಮಗೆ ಸ್ಪಷ್ಟನೆ ಬೇಕಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಸಾವರ್ಕರ್ ಕುರಿತ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆಕ್ರೋಶ ವ್ಯಕ್ತಪಡಿಸುತ್ತಿರುವವರು ಪುಸ್ತಕ ಬರೆದಿರುವ ವ್ಯಕ್ತಿಯನ್ನು ಪ್ರಶ್ನಿಸಬೇಕು. ಕಾಂಗ್ರೆಸ್ ಸೇವಾ ದಳವನ್ನಲ್ಲ. ಒಬ್ಬ ವ್ಯಕ್ತಿಯ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೆ ನೀಡುವುದೇ ತಪ್ಪು. ಆದರೆ, ಕಾಂಗ್ರೆಸ್ ಸೇವಾ ದಳ ಯಾರ ಬಗ್ಗೆಯೂ ಏನನ್ನೂ ಬರೆದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.