ಪೌರತ್ವ ಕಾಯ್ದೆ: ಜ.8ಕ್ಕೆ ಭಾರತ್ ಬಂದ್, ಬ್ಯಾಂಕ್ ನೌಕರರ ಬೆಂಬಲ
ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ.

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ.
ಕೇಂದ್ರ ಸರ್ಕಾರಿ ನೌಕರರು, ಬ್ಯಾಂಕ್ ಉದ್ಯೋಗಿಗಳು, ಶಿಕ್ಷಕರು ಉಕ್ಕು ಮತ್ತು ರೈಲ್ವೇ ಸೇರಿದಂತೆ ವಿವಿಧ ವಲಯಗಳ ನೌಕರರು ಬಂದ್ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿವೆ.
ಕಾರ್ಮಿಕರಿಗೆ ಸಂಬಂಧಿಸಿದ 44 ಕಾಯ್ದೆಗಳನ್ನು ವಿಲೀನಗೊಳಿಸಿ ವೇತನ, ಕೈಗಾರಿಕಾ ಸಂಬಂಧ, ಸಾಮಾಜಿಕ ಭದ್ರತೆ, ಸುರಕ್ಷತಾ ನಿರ್ವಹಣಾ ಷರತ್ತು ಎಂಬ ನಾಲ್ಕು ಸಂಹಿತೆಗಲನ್ನು ರೂಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. 2018ರ ನವೆಂಬರ್ ತಿಂಗಳಿನಲ್ಲಿ ಕೈಗಾರಿಕಾ ಸಂಬಂಧದಲ್ಲಿನ ಕಾರ್ಮಿಕ ಸಂಹಿತೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿದೆ ನೀಡಿದೆ. ಅದರ ಪ್ರಕಾರ, ಈಗಿನ ಕಾರ್ಮಿಕ ಸಂಘಟನೆಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ. ಶೇ.75 ಕಾರ್ಮಿಕರ ಬೆಂಬಲ ಹೊಂದಿರುವ ಕಾರ್ಮಿಕ ಸಂಘಟನೆಗಲಿಗೆ ಮಾತ್ರ ಮಾನ್ಯತೆ ನೀಡಲಾಗುತ್ತದೆ, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕುವುದು ಉದ್ಯೋಗದಾತರಿಗೆ ಸುಲಭವಾಗಲಿದೆ.
ಕಾರ್ಮಿಕರು ಮುಷ್ಕರ ಹೂಡಿದರೆ ಅದನ್ನು ಸಾಮೂಹಿಕ ಸಾಂದರ್ಭಿಕ ರಜೆ ಎಂದು ಪರಿಗಣಿಸಲಾಗುತ್ತದೆ ಎಂಬುದು ಕಾರ್ಮಿಕ ಸಂಘಟನೆಗಳ ವಾದವಾಗಿದೆ .ಇದಲ್ಲದೆ, ಕನಿಷ್ಟ ವೇತನನ್ನು ರೂ.21 ಸಾವಿರದಿಂದ ರೂ.24 ಸಾವಿರದವರೆಗೆ ಹೆಚ್ಚಳ ಮಾಡಬೇಕು. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್'ಸಿ ಹಾಗೂ ಎನ್'ಪಿಆರ್ಗಳನ್ನು ಹಿಂಪಡೆಯಬೇಕು ಎಂಬ ಬೇಡಿಕೆಯನ್ನು ಕಾರ್ಮಿಕ ಸಂಘಟನೆಗಳು ಮಂಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


