ಜೆಎನ್ ಯು ವಿದ್ಯಾರ್ಥಿ ಸಂಘಟನೆ, ಎಬಿವಿಪಿ ನಡುವೆ ಘರ್ಷಣೆ: ಯೋಗೇಂದ್ರ ಯಾದವ್ ಮೇಲೆ ಹಲ್ಲೆ
ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಸ್ವರಾಜ್ ಅಭಿಯಾನ ಮುಖ್ಯಸ್ಥ ಯೋಗೇಂದ್ರ ಯಾದವ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಸ್ವರಾಜ್ ಅಭಿಯಾನ ಮುಖ್ಯಸ್ಥ ಯೋಗೇಂದ್ರ ಯಾದವ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ
ಗೂಂಡಾಗಿರಿಯನ್ನು ತಡೆಯಲು ಯಾರೂ ಕೂಡಾ ಮುಂದಾಗಲಿಲ್ಲ. ಮಾಧ್ಯಮಗಳ ಜೊತೆಗೆ ಮಾತನಾಡಲು ಬಿಡಲಿಲ್ಲ ಎಂದು ಯಾದವ್ ಹೇಳಿದ್ದಾರೆ.ಪೊಲೀಸರು ಅಲ್ಲಿಯೇ ನಿಂತಿದ್ದರೂ ಏನು ಮಾಡಲಿಲ್ಲ, ಪೊಲೀಸರು ಭಯಪಟ್ಟರೇ ಅವರ ಸಮವಸ್ತ್ರವನ್ನು ತೆಗೆದು ಮನೆಗೆ ಹೋಗಲಿ ಎಂದರು
ವಿಶ್ವವಿದ್ಯಾಲಯದ ಶಿಕ್ಷಕರ ಅಸೋಯೇಷನ್ ನಿಂದ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿದೆ.
ಎಬಿವಿಪಿ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಿಂದ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಐಶೆ ಘೋಷ್ ಮತ್ತಿತರರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಆದರೆ, ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ದಾಳಿಯಿಂದ 25 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಎಬಿವಿಪಿ ಆಪಾದಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


