ಶಕ್ತಿ ಮೀರಿ ಪ್ರಯತ್ನಿಸಿದೆವು, ಆದರೂ ಹಿಂಸಾಚಾರ ತಡೆಯಲಾಗಲಿಲ್ಲ: ಜೆಎನ್ ಯು ಹಾಸ್ಟೆಲ್ ವಾರ್ಡನ್ ರಾಜಿನಾಮೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು)ದ ಕ್ಯಾಂಪಸ್ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ನವದೆಹಲಿ: ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು)ದ ಕ್ಯಾಂಪಸ್ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೆಎನ್ ಯು ಹಿಂಸಾಚಾರ ಘಟನೆಯ ನೈತಿಕ ಜವಾಬ್ದಾರಿ ಹೊತ್ತು ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ಆ ಮೀನಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಲಿಖಿತ ಪತ್ರಬರೆದಿರುವ ಮೀನಾ ಅವರು, ಹಿಂಸಾಚಾರ ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದೆವು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇನ್ನು ದೆಹಲಿಯಲ್ಲಿನ ಜೆಎನ್ ಯು ಹಿಂಸಾಚಾರ ಪ್ರಕರಣವನ್ನು ದೆಹಲಿ ಅಪರಾಧ ದಳ ತನಿಖೆ ಮಾಡುತ್ತಿದ್ದು, ಈಗಾಗಲೇ ಹಲವು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


