ಜೆಎನ್'ಯು ಹಿಂಸಾಚಾರ: ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ, ಮಹತ್ವದ ಸುಳಿವು ಸಂಗ್ರಹಿಸಿದ ಪೊಲೀಸರು
ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಪ್ರಕರಣದ ತನಿಖೆ ದೆಹಲಿ ಕ್ರೈಮ್ ಬ್ರಾಂಚ್'ಗೆ ಹಸ್ತಾಂತರಿಸಲಾಗಿದೆ. ಇನ್ನೊಂದೆಡೆ ಜೆಎನ್'ಯು ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗಿದ್ದು, ರಾಜಕೀಯಕ ಪಕ್ಷಗಳು, ಜನತೆ ಹಾಗೂ ವಿದ್ಯಾರ್ಥಿಗಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ದಾಳಿಕೋರರ ಬಂಧನವಾಗಬೇಕು, ಮತ್ತೆಂದೂ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಈ ನಡುವೆ ಶಂಕಿತ ಮುಸುಕುಧಾರಿಗಳಿಂದ ತೀವ್ರ ಹಲ್ಲೆಗೆ ಒಳಗಾಗಿ ಗಾಯಗೊಂಡಿದ್ದ ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆಯಿಷಿ ಘೋಷ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 20-25 ದಾಳಿಕೋರರು ಕಬ್ಬಿಣದ ಸರಳುಗಳಿಂದ ಹೊಡೆದರು. ನನ್ನನ್ನು ಅವರು ಬಡಿದು ಸಾಯಿಸಿಯೇ ಬಿಡುತ್ತಿದ್ದರು. ಬದುಕಿದ್ದೇ ಹೆಚ್ಚು ಎಂದು ಹೇಳಿದ್ದಾರೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳು ವಿಶ್ವವಿದ್ಯಾಲಯದ್ ಅಧಿಕಾರಿಗಳ ಜೊತಗೆ ಘಟನೆಯ ಮಾಹಿತಿ ಪಡೆದುಕೊಂಡರು. ಈ ವೇಲೆ ವಿವಿ ಕುಲಪತಿ ಜಗದೀಶ್ ಕುಮಾರ್ ಗೈರು ಹಾಜರಾಗಿದ್ದರು. ಜಗದೀಶ್ ಕುಮಾರ್ ವಜಾಕ್ಕೆ ಶಿಕ್ಷಕರ ಸಂಘ ಮತ್ತು ಜೆಎನ್'ಯುಎಸ್'ಯು ಆಗ್ರಹಿಸಿವೆ,
ಹಂಸಾಚಾರದ ಬಳಿಕ ಏಮ್ಸ್'ಗೆ ದಾಖಲಾಗಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 34 ಜನರನ್ನು ಬಿಡುಗಡೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


