ನಾನು ನಿಮ್ಮ'ರಕ್ಷಕಿ' ಜನರ ಹಕ್ಕುಗಳನ್ನು ಯೊರೊಬ್ಬರು ಕಸಿದುಕೊಳ್ಳಲು ಬಿಡಲ್ಲ- ಮಮತಾ
ತಾನು ಜನರ ಹಕ್ಕುಗಳ ರಕ್ಷಕಿ ಎಂದು ಹೇಳಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಹಿತಾಸಕ್ತಿಯನ್ನು ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಕೊಲ್ಕತ್ತಾ: ತಾನು ಜನರ ಹಕ್ಕುಗಳ ರಕ್ಷಕಿ ಎಂದು ಹೇಳಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಹಿತಾಸಕ್ತಿಯನ್ನು ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಬೇಕಾದ ಅಗತ್ಯವಿದೆ. ರಾಜ್ಯದ ಜನರನ್ನು ರಕ್ಷಿಸಲು ಏನು ಬೇಕಾದರೂ ಮಾಡುವುದಾಗಿ ಹೇಳಿದ್ದಾರೆ.
ಯಾರೊಬ್ಬರ ದಯೆಯಿಂದ ನಾವು ಬದುಕುತ್ತಿಲ್ಲ. ಯಾರಿಂದಲೂ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡಲ್ಲ, ನಾನು ನಿಮ್ಮ ರಕ್ಷಕಿ ಎಂದರು.
ಒಂದು ವೇಳೆ ಯಾರಾದರೂ ನಿಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಬಂದರೆ ಅದು ನಾನು ಸತ್ತ ಮೇಲೆ.ಅಲ್ಲಿಯವರೆಗೂ ಯಾರೊಬ್ಬರಿಗೂ ಹಕ್ಕುಗಳನ್ನು ಕಿತ್ತುಕೊಳ್ಳಲು ಬಿಡಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


