2021ರ ಪ್ರಾರಂಭಕ್ಕೆ ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ಕಾರ್ಯಾರಂಭ
ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನಿರ್ಮಾಣ ಇದೀಗ ಮೂರನೇ ಹಂತದಲ್ಲಿದ್ದು 2021 ರ ಆರಂಭದಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನಿರ್ಮಾಣ ಇದೀಗ ಮೂರನೇ ಹಂತದಲ್ಲಿದ್ದು 2021 ರ ಆರಂಭದಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಯುದ್ಧ ವಿಮಾನ ವಾಹಕವನ್ನು ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
"ಪ್ರಸ್ತುತ, ವಿಕ್ರಾಂತ್ ನಿರ್ಮಾಣದ ಮೂರನೇ ಹಂತವು ಪ್ರಗತಿಯಲ್ಲಿದೆ, ಇದರಲ್ಲಿ ವಿದ್ಯುತ್ ಉತ್ಪಾದನೆ ಮತ್ತು ಪ್ರೊಪಲ್ಷನ್ ಯಂತ್ರೋಪಕರಣಗಳಂತಹ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಕೆಲಸಕ್ಕೆ ಸಿದ್ಧತೆ ನಡೆದಿದೆ.2021 ರ ಆರಂಭದಲ್ಲಿ ವಾಹಕವನ್ನು ನಿಯೋಜಿಸುವ ಸಾಧ್ಯತೆಯಿದೆ" ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.
ವಾಯುಯಾನ ಪ್ರಯೋಗಗಳು ಸಹ ಒಂದು ವರ್ಷ ಅಥವಾ ಹೆಚ್ಚಿನ ಅವಧಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಡಿಸೆಂಬರ್ 3 ರಂದು ವಿಕ್ರಾಂತ್ 2022 ರ ವೇಳೆಗೆ ಸಂಪೂರ್ಣ ಕಾರ್ಯಾಚರಣೆಗೆ ಸಿದ್ದವಾಗುತ್ತದೆ ಎಂದು ಹಾಗೂ ಇದು ಮಿಗ್ -29 ಕೆ ವಿಮಾನಗಳ ಸಮೂಹವನ್ನು ಹೊಂದಿರುತ್ತದೆ ಎಂದು ಹೇಳಿದ್ದರು.
ಗಣರಾಜ್ಯೋತ್ಸವದಂದು ರಾಜಪಥ್ ನಲ್ಲಿ ನಡೆಯುವ ವಿಧ್ಯುಕ್ತ ಮೆರವಣಿಗೆಯಲ್ಲಿ ಮಿಗ್ -29 ಕೆ ವಿಮಾನದೊಂದಿಗೆ ಪೂರಕವಾದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನೌಕಾಪಡೆಯ ಪ್ರದರ್ಶನದ ಭಾಗವಾಗಿ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


