ದೇಶ

ಶೀಘ್ರದಲ್ಲೇ ಜೆಎನ್‌ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ಜೆಎನ್‌ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್
Published On :

ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದ ಅವರು, ಪೊಲೀಸರು ವಿಶ್ವವಿದ್ಯಾಲಯದಲ್ಲಿನ ಹಿಂಸಾಚಾರ ಕುರಿತು ತನಿಖೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ. 
ದೇಶದ ಯಾವುದೇ ಭಾಗದಲ್ಲಿ ಹಿಂಸಾಚಾರ ನಡೆದರೂ ಅದು ಖಂಡನೀಯ. ಹಿಂಸಾಚಾರಕ್ಕೆ ಜಾಗವಿಲ್ಲ. ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಹೋಗುವ ಶಿಕ್ಷಣಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆಯಲೇಬಾರದು ಎಂದು ಅವರು ಹೇಳಿದ್ದಾರೆ.

ಜೆಎನ್ ಯುನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಬೆಂಬಲ ಸೂಚಿಸಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಂಗಳವಾರ ಸಂಜೆ ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ತೆರಳಿದ್ದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಸತ್ತಾತ್ಮಕ ದೇಶದಲ್ಲಿ ಯಾರು ಎಲ್ಲಿಗೆ ಬೇಕಾದರೂ ಹೋಗಬಹುದು. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದು ಎಂದು ಹೇಳಿದ್ದಾರೆ. 

ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಕುರಿತು ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಪರವಾಗಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.  

ಹಿಂಸಾಚಾರದಲ್ಲಿ ಕೆಲ ಪ್ರಾದ್ಯಾಪಕರು ಸೇರಿದಂತೆ 30 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಭಾನುವಾರ ಸಂಜೆ ಮುಸುಕು ಧರಿಸಿದ್ದ ದುಷ್ಕರ್ಮಿಗಳು ಯೋಜಿತ ರೀತಿಯಲ್ಲಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಾಸ್ಟೆಲ್ ಗಳಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.