'ಜೆಎನ್‌ಯು ದಾಳಿ ಪ್ರಾಯೋಜಿತ ಗೂಂಡಾಗಿರಿ: ಎಚ್ ಆರ್ ಡಿ, ಗೃಹ ಇಲಾಖೆ ನೇರ ಹೊಣೆ'
ಜೆಎನ್‌ಯು ನಡೆದ ದಾಳಿ ಪ್ರಾಯೋಜಿತ ಗೂಂಡಾಗಿರಿ. ಗೃಹ ಸಚಿವ ಅಮಿತ್ ಶಾ, ಎಚ್‌ಆರ್‌ಡಿ ಸಚಿವ ರಮೇಶ್ ಪೋಖ್ರಿಯಾಲ್ ಅವರು ದಾಳಿಯ ಹೊಣೆ ಹೊರಬೇಕು. ದಾಳಿಯಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ನವದೆಹಲಿ: ಜೆಎನ್‌ಯು ನಡೆದ ದಾಳಿ ಪ್ರಾಯೋಜಿತ ಗೂಂಡಾಗಿರಿ. ಗೃಹ ಸಚಿವ ಅಮಿತ್ ಶಾ, ಎಚ್‌ಆರ್‌ಡಿ ಸಚಿವ ರಮೇಶ್ ಪೋಖ್ರಿಯಾಲ್ ಅವರು ದಾಳಿಯ ಹೊಣೆ ಹೊರಬೇಕು. ದಾಳಿಯಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಜೆಎನ್ ಯು ನಲ್ಲಿ ನಡೆದ ಹಿಂಸಾಚಾರ ಘಟನೆ ಇದ್ದಕ್ಕಿದ್ದಂತೆ ನಡೆದದ್ದಲ್ಲ, ಅದೊಂದು ವ್ಯವಸ್ಥಿತ ಪಿತೂರಿ, ಗಲಭೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಕೇಂದ್ರ ಗೃಹ ಇಲಾಖೆಯೇ ಕಾರಣ ಎಂದು ನೇರ ಆರೋಪ ಮಾಡಿದ್ದಾರೆ.
ಜೆಎನ್ ಯು ಉಪ ಕುಲಪತಿಗಳಾಗಿ ಎಂ.ಜಗದೀಶ್ ಕುಮಾರ್ ರಾಜಿನಾಮೆ ನೀಡುವವರಗೂ ಎಲ್ಲವೂ ಸರಿಯಾಗಿತ್ತು ಎಂದು ಹೇಳಿದ್ದಾರೆ. ಈಗ ಆಗಿರುವ ಎಲ್ಲಾ ಘಟನೆಗಳಿಗೆ ನೈತಿಕ ಹೊಣೆ ಹೊತ್ತು ಸದ್ಯ ಅಧಿಕಾರದಲ್ಲಿರುವ ಉಪ ಕುಲಪತಿ ರಾಜಿನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


