ಜೆಎನ್ ಯು ಹಿಂಸಾಚಾರ ಪ್ರಕರಣಕ್ಕೆ ಟ್ವಿಸ್ಟ್: ಶಂಕಿತ ದಾಳಿಕೋರರ ಪಟ್ಟಿಯಲ್ಲಿ ಐಶೆ ಘೋಷ್ ಹೆಸರು!
ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ದೆಹಲಿ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದು, ಅಂದು ಪ್ರತಿಭಟನೆ ನಡೆಸುತ್ತಿದ್ದ ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ ಅವರನ್ನೂ ದಾಳಿ ನಡೆಸಿದ ದಾಳಿಕೋರರ ಶಂಕಿತ ಪಟ್ಟಿಗೆ ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನವದೆಹಲಿ: ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಗೆ ದೆಹಲಿ ಪೊಲೀಸರು ಹೊಸ ಟ್ವಿಸ್ಟ್ ನೀಡಿದ್ದು, ಅಂದು ಪ್ರತಿಭಟನೆ ನಡೆಸುತ್ತಿದ್ದ ಜೆಎನ್ಎಸ್ ಯು ಅಧ್ಯಕ್ಷೆ ಐಶೆ ಘೋಷ್ ಅವರನ್ನೂ ದಾಳಿ ನಡೆಸಿದ ದಾಳಿಕೋರರ ಶಂಕಿತ ಪಟ್ಟಿಗೆ ಸೇರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಹೌದು.. ಜೆಎನ್ ಯು ಹಿಂಸಾಚಾರ ಪ್ರಕರಣದಲ್ಲಿ ದಾಳಿ ನಡೆಸಿದ ಶಂಕಿತ ದಾಳಿಕೋರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಪಟ್ಟಿಯಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶೆ ಘೋಷ್ ಅವರ ಹೆಸರೂ ಕೂಡ ಇರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ಇತರೆ 8 ಮಂದಿ ಶಂಕಿತರ ಪಟ್ಟಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಎಸ್ ರಾಂಧವ ಅವರು, ಈ ವರೆಗೆ ತನಿಖಾಧಿಕಾರಿಗಳು ಕಲೆಹಾಕಿರುವ ಮಾಹಿತಿಗಳ ಮೇರೆಗೆ ಜೆಎನ್ ಯು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಸಿದಂತೆ ಶಂಕಿತ ದಾಳಿಕೋರರನ್ನು ಗುರುತಿಸಲಾಗಿದೆ. ಶಂಕಿತರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದರು.
ಅಂತೆಯೇ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಇತರೆ ಮಾಧ್ಯಮಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದನ್ನು ಇಲಾಖೆ ಗಮನಿಸಿದೆ. ಈ ವರೆಗೂ ಅಧಿಕಾರಿಗಳು ಯಾವುದೇ ಶಂಕಿತರನ್ನು ವಶಕ್ಕೆ ಪಡೆದಿಲ್ಲ. ಮತ್ತು ಯಾರನ್ನೂ ತನಿಖೆಗೊಳಪಡಿಸಿಲ್ಲ. ಆದರೂ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿವೆ. ಇದೇ ಕಾರಣಕ್ಕೆ ಇಂದು ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನಾಧರಿಸಿ ಶಂಕಿತ ದಾಳಿಕೋರರನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಅವರನ್ನು ತನಿಖೆಗೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Related Article
ವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ!
'ಜೆಎನ್‌ಯು ದಾಳಿ ಪ್ರಾಯೋಜಿತ ಗೂಂಡಾಗಿರಿ: ಎಚ್ ಆರ್ ಡಿ, ಗೃಹ ಇಲಾಖೆ ನೇರ ಹೊಣೆ'
ಹೊಡೆಯಲು ಕಲ್ಲು ಎತ್ತಿಕೊಂಡರೆ, ನಾವು ಬಾಂಬ್ ಗಳನ್ನು ಎತ್ತಿಕೊಳ್ಳುತ್ತೇವೆ: ತೆಲಂಗಾಣ ಬಿಜೆಪಿ ಸಂಸದ
ಜೆಎನ್ ಯು ಹಿಂಸಾಚಾರ ರಾಷ್ಟ್ರೀಯ ಸಮಸ್ಯೆಯಲ್ಲ, ಕಾಲೇಜುಗಳಲ್ಲಿ ಗ್ಯಾಂಗ್ ವಾರ್ ಗಳು ಸಾಮಾನ್ಯ: ಕಂಗನಾ ರಾನಾವತ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


