ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ: ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆ
ಪತ್ನಿಯನ್ನು ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಆರೋಪಿ ಶಿವಶಂಕರ್ ಎಂಬಾತ, ಪತ್ನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ.

ಬೆಂಗಳೂರು: ಪತ್ನಿಯನ್ನು ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಆರೋಪಿ ಶಿವಶಂಕರ್ ಎಂಬಾತ, ಪತ್ನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ.
‘ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯ ಸುಬ್ಬಯ್ಯ ಗಾರ್ಡನ್‌ನ ಹೊಂಗಸಂದ್ರ ನಿವಾಸಿ ಅನುಷಾ (26) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರದ್ದು ಕೊಲೆ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಗೊತ್ತಾಗಿದೆ.
ಪತಿಯೇ ಕೊಲೆ ಮಾಡಿರುವ ಅನುಮಾನವಿದ್ದು, ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.
‘ಆರೋಪಿ ಶಿವಶಂಕರ್ ಹಾಗೂ ಅನುಷಾ ಕೆಲ ವರ್ಷಗಳ ಹಿಂದೆ ಮದುವೆ ಆಗಿದ್ದರು. ಸುಬ್ಬಯ್ಯ ಗಾರ್ಡನ್‌ನಲ್ಲಿ ನೆಲೆಸಿದ್ದ ದಂಪತಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಇತ್ತೀಚೆಗೆ ನಿತ್ಯವೂ ದಂಪತಿ ನಡುವೆ ಜಗಳ ಶುರುವಾಗಿತ್ತು. ಅದೇ ಕಾರಣಕ್ಕೆ ಆರೋಪಿ, ಜನವರಿ 2ರಂದು ನಸುಕಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದ.
ಕೊಲೆ ಬಳಿಕ ಪತ್ನಿಯ ಪೋಷಕರಿಗೆ ಕರೆ ಮಾಡಿದ್ದ ಆರೋಪಿ, ‘ನಿಮ್ಮ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.
ಪ್ರಜ್ಞೆ ಕಳೆದುಕೊಂಡಿದ್ದ ಆಕೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ’ ಎಂದು ಹೇಳಿದ್ದ. ಪೋಷಕರು ಮೃತದೇಹವನ್ನು ನೋಡಲು ಹೋದಾಗ ಕುತ್ತಿಗೆ ಭಾಗದಲ್ಲಿ ಗಾಯವಿರುವುದನ್ನು ಕಂಡಿದ್ದರು. ನಂತರ ಅವರೇ ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಹೇಳಿದರು.
ಪತ್ನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


