ಜಾರ್ಖಂಡ್: ಐದು ನಕ್ಸಲರ ಬಂಧನ, ತನಿಖೆ ಮುಂದುವರಿಕೆ
ನಕ್ಸಲ್ ಪೀಡಿತ ಜಾರ್ಖಂಡ್ ನಲ್ಲಿ ಮತ್ತೆ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.

ರಾಂಚಿ: ನಕ್ಸಲ್ ಪೀಡಿತ ಜಾರ್ಖಂಡ್ ನಲ್ಲಿ ಮತ್ತೆ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವಾರವಷ್ಟೇ ಪೊಲೀಸರ ಮೇಲೆ ದಾಳಿ ಮಾಡಿ 4 ಪೊಲೀಸರನ್ನು ಹತ್ಯೆಗೈದು ಪರಾರಿಯಾಗಿದ್ದ 7 ಮಂದಿ ನಕ್ಸಲರನ್ನು ಪೊಲೀಸರು ಬಂಧಿಸಿದ್ದರು. ಸೋಮಾವಾರ ತ್ರಿತೀಯ ಪ್ರಸ್ತುತಿ ಕಮಿಟಿಯು(ಟಿಪಿಸಿ) ಈ ನಕ್ಸಲರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಲುನಾಥ್ನ ಗಡಿ ಭಾಗದಲ್ಲಿ ನಕ್ಸಲರು ಸಂಚರಿಸುತ್ತಿದ್ದ ವೇಳೆ ಪೊಲೀಸರು 7 ಮಂದಿ ನಕ್ಸಲರನ್ನು ಬಂಧಿಸಿದ್ದರು.
ಇದರ ಬೆನ್ನಲ್ಲೇ ಇಂದು ಮತ್ತೆ ಪೊಲೀಸರು ಐದು ಮಂದಿ ನಕ್ಸಲರನ್ನು ಬಂಧಿಸಿದ್ದಾರೆ. ಪಲಮು ಜಿಲ್ಲೆಯ ಹೊರವಲಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜಾರ್ಖಂಡ್ ಪೊಲೀಸರು ಐದು ಮಂದಿ ನಕ್ಸಲರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


