ದೇಶ

ಮರಾಡು ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯ ಮುಂದುವರಿಕೆ, ಮತ್ತೊಂದು ಕಟ್ಟಡ ನೆಲಸಮ

ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಗಗನಚುಂಬಿ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಮುಂದುವರೆದಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಮರಾಡು ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯ ಮುಂದುವರಿಕೆ, ಮತ್ತೊಂದು ಕಟ್ಟಡ ನೆಲಸಮ
ಕಟ್ಟಡ ನೆಲಸಮ ಕಾರ್ಯಾಚರಣೆ
Published On :

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಗಗನಚುಂಬಿ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಮುಂದುವರೆದಿದ್ದು, ಇಂದೂ ಕೂಡ ಮತ್ತೊಂದು ಫ್ಲಾಟ್ ಅನ್ನು ಧ್ವಂಸಗೊಳಿಸಲಾಗಿದೆ.

ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೊಚ್ಚಿಯ ಮರಾಡು ಪ್ರದೇಶ ಬಳಿಯಿದ್ದ 4 ಲಕ್ಸುರಿ​ ವಸತಿ ಕಟ್ಟಡವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ ನಾಲ್ಕು ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ಶನಿವಾರ  ಕಟ್ಟಡಗಳನ್ನು ಧ್ವಂಸಗೊಳಿಸಿ, ತೆರುವುಗೊಳಿಸಿದ್ದ ಕೇರಳ ಸರ್ಕಾರ, ಇಂದು ಮತ್ತೊಂದು ಕಟ್ಟಡಗಳನ್ನು ಹೊಡೆದುರುಳಿಸಿದೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕಟ್ಟಡ ಉರುಳಿಸುವ ಕೆಲಸವನ್ನು ಕೈಗೆತ್ತಿಕೊಂಡ ಕೇರಳ ಸರ್ಕಾರ, ನಿಯಂತ್ರಿತ ಸ್ಫೋಟಕಗಳನ್ನು ಬಳಸಿಕೊಂಡು ಬಹು ಎತ್ತರದ ಎಚ್​2ಒ ಹೋಲಿ ಫೈತ್​​ ಅಪಾರ್ಟ್​ಮೆಂಟ್​ ಅನ್ನು ನೆಲಸಮ ಮಾಡಿತು. 

ಬಳಿಕ ಕಟ್ಟಡ ಅವಶೇಷಗಳನ್ನು ತೆರವುಗೊಳಿಸಲಾಗಿತ್ತು. ಇಂದು ಬೆಳಗ್ಗೆ ಅದೇ ಸಮಯದಲ್ಲಿ ಮತ್ತೆರಡು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಸ್ಫೋಟಕಗಳನ್ನಿಟ್ಟು ಜೈನ್​ ಕೊರಲ್​ ಕೋವ್​ ಕಾಂಪ್ಲೆಕ್ಸ್​ ಅನ್ನು ಇಂದು ಧ್ವಂಸ ಮಾಡಲಾಗಿದ್ದು, ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ವಿಶೇಷವೆಂದರೆ ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ನಡೆದ ಅತ್ಯಂತ ದೊಡ್ಡ ಕಟ್ಟಡ ನೆಲಸಮ ಕಾರ್ಯಾಚರಣೆ ಇದಾಗಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕಟ್ಟಡ ತೆರವಿಗೆ ಸುಪ್ರೀಂಕೊರ್ಟ್​ ಆದೇಶ ನೀಡಿತ್ತು. ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮಾರಾಡುವಿನಲ್ಲಿರುವ ಕಟ್ಟಡಗಳನ್ನು ನೆಲಕ್ಕುರುಳಿಸಲು ಕೇರಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಕ್ಕಾಗಿ ನ್ಯಾಯಾಲಯ 138 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದಲ್ಲದೆ, ಮನೆ ಕಳೆದುಕೊಂಡವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.