ಜೆಎನ್ ಯು ದಾಳಿ: ಮುಸುಕುದಾರಿ ಮಹಿಳೆಯನ್ನು ಗುರುತಿಸಿದ ಪೊಲೀಸರು
ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರದ ವಿಡಿಯೋದಲ್ಲಿದ್ದ ಮುಸುಕುದಾರಿ ಮಹಿಳೆಯನ್ನು ವಿಶೇಷ ತನಿಖಾ ತಂಡವೊಂದು ಗುರುತಿಸಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಆಕೆಗೆ ನೋಟಿಸ್ ಕಳುಹಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದ ಹಿಂಸಾಚಾರದ ವಿಡಿಯೋದಲ್ಲಿದ್ದ ಮುಸುಕುದಾರಿ ಮಹಿಳೆಯನ್ನು ವಿಶೇಷ ತನಿಖಾ ತಂಡವೊಂದು ಗುರುತಿಸಿದೆ. ವಿಚಾರಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಆಕೆಗೆ ನೋಟಿಸ್ ಕಳುಹಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಜನವರಿ 5 ರಂದು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಏಳಕ್ಕೂ ಹೆಚ್ಚು ಮಂದಿಯನ್ನು ಎಸ್ ಐಟಿ ಗುರುತಿಸಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಇದಕ್ಕೂ ಮುಂಚೆ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶ್ ಘೋಷ್ ಸೇರಿದಂತೆ 9 ಮಂದಿ ಶಂಕಿತರ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು.
ಜನವರಿ 5 ರಂದು ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿನ ಸಬರಮತಿ ಹಾಸ್ಟೆಲ್ ಗೆ ನುಗಿದ್ದ ಮುಸುಕುದಾರಿ ದುಷ್ಕರ್ಮಿಗಳು, ಹಾಸ್ಟೆಲ್ ಧ್ವಂಸ ಮಾಡಿ ಸುಮಾರು 30 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


