ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 25 ಮಂದಿಗೆ ಗಾಯ
ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.

ಭುವನೇಶ್ವರ: ಮುಂಬೈ- ಭುಬನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ.
ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು ನೀರ್ಗುಂಡಿ ಮಧ್ಯಭಾಗದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಆರು ಜನರು ಗಂಭೀರವಾಗಿದ್ದಾರೆಂದು ವರದಿಯಾಗಿದೆ.
ಸ್ಥಳದಲ್ಲಿ ಮಂಜು ಕವಿದಿತ್ತು. ಇದರಿಂದಾಗಿ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕವಾಗಿ ವರದಿಯಾಗಿದೆ. ರಕ್ಷಣಾ ಕಾರ್ಯ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


