ಗರ್ಭಿಣಿ ಪತ್ನಿಯ ಹತ್ಯೆ: ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ!
ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ರಾಯ್ ಬರೇಲಿ: ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಜ.04 ರಂದು ಈ ಹತ್ಯೆ ಸಂಭವಿಸಿದೆ. ಆದರೆ ಜ.14 ರಂದು ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಘಟನೆಗೆ ಸಾಕ್ಷಿಯಾಗಿದ್ದ ಸಂತ್ರಸ್ತೆ ಊರ್ಮಿಳಾ ಅವರ ಹಿರಿಯ ಮಗಳು ತಾಯಿಯ ತವರುಮನೆಗೆ ತೆರಳಿ ಘಟನೆಯನ್ನು ವಿವರಿಸಿದ್ದಾಳೆ. ಈ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ.
ಕುಟುಂಬ ಸದಸ್ಯರ ದೂರನ್ನು ಆಧರಿಸಿ ಪೊಲೀಸರು ಹತ್ಯೆಯ ಆರೋಪಿ ರವೀಂದ್ರ ಕುಮಾರ್ (35) ನ್ನು ಬಂಧಿಸಿದ್ದಾರೆ. ಆರೋಪಿ ರವೀಂದ್ರ ಕುಮಾರ್ ಮತ್ತು ಊರ್ಮಿಳಾ 2011 ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದರೆ ರವೀಂದ್ರ ಕುಮಾರ್ ಮನೆಯಲ್ಲಿ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಈ ಬಾರಿಯೂ ಊರ್ಮಿಳ ಹೆಣ್ಣುಮಗುವಿಗೆ ಜನ್ಮ ನೀಡಬಹುದೆಂದು ಶಂಕಿಸಿ ಆಕೆಯನ್ನು ಹತ್ಯೆ ಮಾಡಿ ದೇಹ, ಭ್ರೂಣವನ್ನು ತುಂಡು ತುಂಡಾಗಿ ಕತ್ತರಿಸಿ, ದಹನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಿಕ್ಕ ಸಾಕ್ಶ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


