ಫೆ.1, ಬೆಳಿಗ್ಗೆ 6 ಕ್ಕೆ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್: ದೆಹಲಿ ಕೋರ್ಟ್ ನಿಂದ ಹೊಸ ಡೆತ್ ವಾರೆಂಟ್
ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ 2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್ ಹೊರಡಿಸಿದೆ.

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ 2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್ ಹೊರಡಿಸಿದೆ.
ನಿರ್ಭಯಾ ಅತ್ಯಾಚಾರಿಗಳ ವಿರುದ್ಧ ಹೊಸದಾಗಿ ಡೆತ್ ವಾರೆಂಟ್ ಹೊರಡಿಸಬೇಕೆಂದು ದೆಹಲಿ ನ್ಯಾಯಾಲಯವನ್ನು ತಿಹಾರ್ ಜೈಲು ಕೋರಿತ್ತು.
ಅತ್ಯಾಚಾರಿಗಳ ಪೈಕಿ ಒಬ್ಬನಾಗಿದ್ದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ ಬಳಿಕ ಸಂಜೆ 4-30ರೊಳಗೆ ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸುವುದಾಗಿ ಅರೊರಾದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ತಿಳಿಸಿದ್ದರು.
ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾಧಾನದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಇರ್ಪಾನ್ ಅಹ್ಮದ್ ನ್ಯಾಯಾಲಯದ ಗಮನಕ್ಕೆ ತಂದರು. ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಹಿಂದೆ ನಿಗದಿಯಾಗಿದ್ದ ಜನವರಿ 22ರ ಬದಲಿಗೆ ಫೆಬ್ರವರಿ 1 ರಂದು ಗಲ್ಲು ಶಿಕ್ಷೆಯನ್ನು ನಿಗದಿಪಡಿಸಿ ತೀರ್ಪು ಪ್ರಕಟಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


