ಕಾಶ್ಮೀರ ಕಣಿವೆಯಲ್ಲಿ ಪ್ರಿಪೇಯ್ಡ್ ಮೊಬೈಲ್ ಎಸ್‌ಎಂಎಸ್, ವಾಯ್ಸ್ ಕಾಲ್ ಸೇವೆ ಪುನಾರಂಭ
ಸುಮಾರು ಐದು ತಿಂಗಳ ನಂತರ ಜಮ್ಮು – ಕಾಶ್ಮೀರದಲ್ಲಿ ಶನಿವಾರದಿಂದ ಪ್ರಿಪೇಯ್ಡ್ ಮೊಬೈಲ್ ಎಸ್ಎಂಎಸ್ ಹಾಗೂ ವಾಯ್ಸ್ ಕಾಲ್ ಸೇವೆಯನ್ನು ಪುನಾರಂಭಿಸಲಾಗಿದೆ.

ಶ್ರೀನಗರ: ಸುಮಾರು ಐದು ತಿಂಗಳ ನಂತರ ಜಮ್ಮು – ಕಾಶ್ಮೀರದಲ್ಲಿ ಶನಿವಾರದಿಂದ ಪ್ರಿಪೇಯ್ಡ್ ಮೊಬೈಲ್ ಎಸ್ಎಂಎಸ್ ಹಾಗೂ ವಾಯ್ಸ್ ಕಾಲ್ ಸೇವೆಯನ್ನು ಪುನಾರಂಭಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶದ ಎಲ್ಲಾ ಸ್ಥಳೀಯ ಪ್ರಿಪೇಯ್ಡ್ ಮೊಬೈಲ್ ಸಂಪರ್ಕಕ್ಕಾಗಿ ಧ್ವನಿ ಕರೆಗಳು ಮತ್ತು ಎಸ್‌ಎಂಎಸ್ ಅನ್ನು ಮರುಸ್ಥಾಪಿಸಲಾಗಿದೆ ಎಂದು ಕೇಂದ್ರ ಪ್ರದೇಶದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಜಾರಿಗೊಳಿಸಲಾದ ಕೆಲವು ತೀವ್ರ ನಿರ್ಬಂಧಗಳನ್ನು ಸಡಿಲಿಸುವ ಇತ್ತೀಚಿನ ಕ್ರಮದ ಭಾಗವಾಗಿ ಅವುಗಳನ್ನು ಪುನರಾರಂಭಿಸಲಾಗಿದೆ.
ಕಾಶ್ಮೀರದ ಬಂಡಿಪೋರಾ ಮತ್ತು ಕುಪ್ವಾರಾ ಜಿಲ್ಲೆಗಳು ಮತ್ತು ಜಮ್ಮುವಿನ ಎಲ್ಲಾ 10 10 ಜಿಲ್ಲೆಗಳಲ್ಲಿ ಕೆಲವು ನಿರ್ಬಂಧಗಳೊಂದಿಗೆ 2ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಹಿರಿಯ ಅಧಿಕಾರಿ ರೋಹಿತ್ ಕನ್ಸಾಲ್ ಜಮ್ಮುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಿಸುತ್ತಿದ್ದು, ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧವನ್ನು ಇಂದಿನಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಕಾಶ್ಮೀರ ಕಣಿವೆಯ ಎಲ್ಲಾ 10 ಜಿಲ್ಲೆಗಳಲ್ಲಿ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಸೇವೆಗಳು ದೊರೆಯಲಿವೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕಳೆದ ಆಗಸ್ಟ್ 5 ರಂದು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು, ಜನರು ವದಂತಿಗಳನ್ನು ಹಬ್ಬುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಮತ್ತು ಮೊಬೈಲ್ ಸೇವೆಗಳ ಮೇಲೆ ನಿರ್ಬಂಧ ಹಾಕಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


