’ತಸ್ಲಿಮಾ ನಸ್ರಿನ್, ಅದ್ನಾನ್ ಸಮಿ ಸೇರಿ ಕಳೆದ 6 ವರ್ಷಗಳಲ್ಲಿ 3000 ನಿರಾಶ್ರಿತರಿಗೆ ಭಾರತೀಯ ಪೌರತ್ವ’
ಸಿಎಎ-2019 ರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದು, ಪಾಕಿಸ್ತಾನದಿಂದ ಬಂದಿರುವ 2838 ಜನರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದಿದ್ದಾರೆ.

ಚೆನ್ನೈ; ಸಿಎಎ-2019 ರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದು, ಪಾಕಿಸ್ತಾನದಿಂದ ಬಂದಿರುವ 2838 ಜನರಿಗೆ ಕಳೆದ 6 ವರ್ಷಗಳಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದಿಂದ ಬಂದಿದ್ದ 914 ಜನರಿಗೆ, ಬಾಂಗ್ಲಾದಿಂದ ಶರಣಾಗತಿ ಬಯಸಿ ಬಂದ 172 ಜನರು (ಮುಸ್ಲಿಮರೂ ಸೇರಿದಂತೆ) ಒಟ್ಟಾರೆ 2838 ಜನರಿಗೆ ಕಳೆದ ಆರು ವರ್ಷಗಳಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ. 1964 ರಿಂದ 2008 ವರೆಗೆ ಶ್ರೀಲಂಕಾದಿಂದ ಬಂದಿರುವ 4,00,000 ತಮಿಳಿರಿಗೆ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಚೆನ್ನೈ ನಲ್ಲಿ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
2014 ವರೆಗೆ ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನದಿಂದ ಬಂದಿದ್ದ 566 ಮುಸ್ಲಿಮರಿಗೆ ಭಾರತೀಯ ಪೌರತ್ವ ನೀಡಲಾಗಿತ್ತು. 2016-18 ರ ಮೋದಿ ಸರ್ಕಾರದ ನೇತೃತ್ವದಲ್ಲಿ 1595 ಪಾಕಿಸ್ತಾನಿ ವಲಸಿಗರು, 391 ಅಫ್ಘಾನಿಸ್ತಾನ ಮುಸ್ಲಿಮರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಇದೇ ವೇಳೆಯಲ್ಲಿ ಅದ್ನಾನ್ ಸಮಿ, ತಲ್ಸಿಮಾ ನಸ್ರಿನ್ ಅವರಿಗೂ ಪೌರತ್ವ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


