ಮುಜಾಫರಪುರ್ ಸೆಕ್ಸ್ ಹಗರಣ: ಮಾಜಿ ಶಾಸಕ ಬ್ರಜೇಶ್ ಥಾಕೂರ್ ಸೇರಿ 19 ಮಂದಿ ತಪ್ಪಿತಸ್ಥರು
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಿಹಾರದ ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬ್ರಜೇಶ್ ಥಾಕೂರ್ ಹಾಗೂ ಇತರೆ 18 ಮಂದಿ ತಪ್ಪಿತಸ್ಥರು ಎಂದು ದೆಹಲಿ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಿಹಾರದ ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬ್ರಜೇಶ್ ಥಾಕೂರ್ ಹಾಗೂ ಇತರೆ 18 ಮಂದಿ ತಪ್ಪಿತಸ್ಥರು ಎಂದು ದೆಹಲಿ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಕುಲಶ್ರೆಷ್ಠ ಅವರು, ಪೋಕ್ಸೋ ಕಾಯ್ದೆ ಅಡಿ ಮತ್ತು ಸಾಮೂಹಿಕ ಅತ್ಯಾಚಾರ ಕಾಯ್ದೆ ಅಡಿ ಮಾಜಿ ಶಾಸಕ ತಪ್ಪಿತಸ್ಥ ಎಂದು ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 12 ಪುರುಷರು ಹಾಗೂ ಎಂಟು ಮಹಿಳಾ ಆರೋಪಿಗಳು ತಪ್ಪಿತಸ್ಥರಾಗಿದ್ದು, ಓರ್ವ ಆರೋಪಿಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
ಬಿಹಾರ ಪೀಪಲ್ಸ್ ಪಾರ್ಟಿ(ಬಿಪಿಪಿ)ಯ ಮಾಜಿ ಶಾಸಕ ಬ್ರಜೇಶ್ ಥಾಕೂರ್ ಶೆಲ್ಟರ್ ಹೋಮ್ ನಡೆಸುತ್ತಿದ್ದರು. ಥಾಕೂರ್ ನಡೆಸುತ್ತಿದ್ದ ಬಾಲಿಕ ಗೃಹದಲ್ಲಿದ್ದ ಕನಿಷ್ಠ 34 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ವೈದ್ಯಕೀಯ ವರದಿ ಖಚಿತಪಡಿಸಿತ್ತು.
ಮುಜಾಫರಪುರದ ಸರ್ಕಾರಿ ಆಶ್ರಯ ತಾಣದಲ್ಲಿದ್ದ 40 ಬಾಲಕಿಯರ ಪೈಕಿ 34 ಬಾಲಕಿಯರ ಮೇಲೆ ಅಲ್ಲಿನ ಸಿಬ್ಬಂದಿ, ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಿರಂತರ ಅತ್ಯಾಚಾರ ಎಸಗಿದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿಬಿಐಗೆ ಒಪ್ಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


