6ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಶಿಕ್ಷಕರು ಸೇರಿ ಐವರ ವಿರುದ್ಧ ದೂರು ದಾಖಲು
ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಮತ್ತು ಪೊಕ್ಸೊ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಇತ್ತ ಸಂತ್ರಸ್ಥ ಬಾಲಕಿ ನಗರದ ಖಾಸಗಿ ಆ

ಮುಂಬೈ: ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಮತ್ತು ಪೊಕ್ಸೊ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಇತ್ತ ಸಂತ್ರಸ್ಥ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ.
6 ನೇ ತರಗತಿಯ ವಿದ್ಯಾರ್ಥಿನಿಯನ್ನು ಶಾಲೆಯಸಾಂಸ್ಕೃತಿಕ ಕಾರ್ಯಕ್ರಮದ ವಿಡಿಯೋ ತೋರಿಸುವ ನೆಪದಲ್ಲಿ ಶಿಕ್ಷಕರು ಕೋಣೆಗೆ ಕರೆದೊಯ್ದಿದ್ದಾರೆ.ಆಕೆಗೆ ಅಶ್ಲೀಲ ತುಣುಕುಗಳನ್ನು ತೋರಿಸಿ ಬಳಿಕ ಅತ್ಯಾಚಾರ ನಡೆಸಲಾಗಿದೆ.ಗಯಗೊಂಡಿರುವ ಬಾಲಕಿ ಆರೋಗ್ಯ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಪ್ರಕರಣದಲ್ಲಿ ಇಬ್ಬರು ಶಿಕ್ಷಕರು ಮತ್ತು ಇತರೆ ಮೂವರು ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ತಾಯಿ ಆರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ ಆದರೆ ಶಾಲಾ ಆಡಳಿತ ಈ ಘ್ಟನೆ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಆಕೆಗೆ ಬೆದರಿಕೆ ಹಾಕಿದೆ.ಅವಳು ಪೊಲೀಸರಿಗೆ ದೂರು ನೀಡುವುದಿಲ್ಲ ಎಂದು ಸಹ ಪ್ರಮಾಣ ಮಾಡಿಸಿಕೊಳ್ಲಲಾಗಿದೆ ಆದರೆ ಪೋಲೀಸರಿಗೆ ಇತರೆ ಮೂಲಗಳಿಂದ ಘಟನೆ ಬಗೆಗೆ ಮಾಹಿತಿ ಸಿಕ್ಕಿದ್ದು ಅವರು ಕುಟುಂಬವನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


