ಇಂದು ಪ್ರಧಾನಿ ಮೋದಿಯವರ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ: 2000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋಮವಾರ 'ಪರೀಕ್ಷಾ ಪೆ ಚರ್ಚಾ 2020'ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು ದೇಶಾದ್ಯಂತ ಸುಮಾರು 2000 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೋಮವಾರ 'ಪರೀಕ್ಷಾ ಪೆ ಚರ್ಚಾ 2020'ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು ದೇಶಾದ್ಯಂತ ಸುಮಾರು 2000 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಲಿದ್ದಾರೆ.
ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಮೂರನೇ ಬಾರಿ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದು ದೆಹಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.
ವಿದ್ಯಾರ್ಥಿಗಳೊಂದಿಗೆ ಪ್ರಧಾನಿಯವರು ಸಂವಾದ ನಡೆಸುತ್ತಾ ಅವರು ಪರೀಕ್ಷಾ ಒತ್ತಡವನ್ನು ಹೇಗೆ ಎದುರಿಸಬೇಕು, ಪರೀಕ್ಷೆ ಸಮಯದಲ್ಲಿ ಹೇಗೆ ಅಧ್ಯಯನ ಮಾಡಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಹೇಳಿಕೊಡಲಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮೈಗವರ್ನ್ ಮೆಂಟ್ ಜೊತೆ ಈಗಾಗಲೇ ಐದು ವಿವಿಧ ವಿಷಯಗಳನ್ನಿಟ್ಟುಕೊಂಡು 9ರಿಂದ 12ನೇ ತರಗತಿಯೊಳಗಿನ ಮಕ್ಕಳಿಗೆ ಸಣ್ಣ ಪ್ರಬಂಧ ಸ್ಪರ್ಧೆ ನಡೆಸಿಕೊಟ್ಟಿತ್ತು. ಇದರ ಮೂಲಕ ಇಂದಿನ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ 1,050 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಈ ಕಾರ್ಯಕ್ರಮವನ್ನು ಮತ್ತಷ್ಟು ವಿದ್ಯಾರ್ಥಿ ಕೇಂದ್ರವಾಗಿಸಲು ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರ ಸಮ್ಮುಖದಲ್ಲಿ ಭಾಗವಹಿಸಿ ಅವರೊಂದಿಗೆ ಚರ್ಚೆ, ಸಂವಾದ ನಡೆಸಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಉತ್ಸುಕವಾಗಿದ್ದಾರೆ.
ಪ್ರಧಾನಿಯವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು 2018ರಲ್ಲಿ ಮೊದಲ ಸಲ ಇದೇ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


