ದಕ್ಷಿಣ ಭಾರತಕ್ಕೆ ಮೊದಲು: ತಂಜಾವೂರು ವಾಯುಪಡೆ ಕೇಂದ್ರಕ್ಕೆ ಸುಖೋಯ್-30 ಎಂಕೆಐ ಸೇರ್ಪಡೆ
ಭಾರತೀಯ ರಕ್ಷಣಾ ಸನ್ನದ್ಧತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕಾರ್ಯಾಚರಣೆ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸುಖೋಯ್ -30 ಯುದ್ಧ ವಿಮಾನವನ್ನು ಇಲ್ಲಿನ ವಾಯುಪಡೆ ಕೇಂದ್ರಕ್ಕೆ ಸೇರ್ಪಡೆಗೊಳಿಸಲಾಗಿದೆ.

ತಂಜಾವೂರು: ಭಾರತೀಯ ರಕ್ಷಣಾ ಸನ್ನದ್ಧತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕಾರ್ಯಾಚರಣೆ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸುಖೋಯ್ -30 ಯುದ್ಧ ವಿಮಾನವನ್ನು ಇಲ್ಲಿನ ವಾಯುಪಡೆ ಕೇಂದ್ರಕ್ಕೆ ಸೇರ್ಪಡೆಗೊಳಿಸಲಾಗಿದೆ.
ಬ್ರಹ್ಮೋಸ್ ಕ್ಷಿಪಣಿ ಒಳಗೊಂಡ ಸುಖೋಯ್-30 ಎಂಕೆಐ ಯುದ್ಧವಿಮಾನವನ್ನು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಳಿಸಲಾಯಿತು. ಕೊಯಮತ್ತೂರಿನ ಸೂಲೂರ್ ವಾಯುಪಡೆ ನೆಲೆಗೆ ಮುನ್ನೆಲೆಯ ಯುದ್ಧವಿಮಾನ ಈಗಾಗಲೇ ಸೇರ್ಪಡೆಗೊಂಡಿದ್ದು, ಇಂದು ಸೇರ್ಪಡೆಯಾದ ಯುದ್ಧವಿಮಾನ ದಕ್ಷಿಣ ಭಾರತದ ಮುನ್ನೆಲೆಯ ಎರಡನೇ ಯುದ್ಧವಿಮಾನವಾಗಿದೆ.
ತಂಜಾವೂರು, ದಕ್ಷಿಣ ವಾಯು ಕಮಾಂಡ್ ನ ಸುಖೋಯ್-30 ಯುದ್ಧವಿಮಾನವನ್ನು ಪಡೆದ ಮೊದಲ ಕೇಂದ್ರವೆನಿಸಿದೆ. 2013ರ ಮೇ 27ರಂದು ತಂಜಾವೂರು ವಾಯು ಪಡೆ ಕೇಂದ್ರವನ್ನು ಅಂದಿನ ರಕ್ಷಣಾ ಸಚಿವ ಎ.ಕೆ.ಆಂಟನಿ ರಾಷ್ಟ್ರಕ್ಕೆ ಸಮರ್ಪಿಸಿದ್ದರು.
ಹಿಂದೂ ಮಹಾಸಾಗರ ಪ್ರದೇಶದ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಆರ್ಥಿಕ ಹಿತಾಸಕ್ತಿ ಮತ್ತು ಆಸ್ತಿಗಳನ್ನು ರಕ್ಷಿಸುವುದಕ್ಕಾಗಿ ಈ ಕೇಂದ್ರ ಸ್ಥಾಪಿಸಲಾಗಿದೆ. ತಂಜಾವೂರು ಮತ್ತು ಕೊಯಮತ್ತೂರು ಕೇಂದ್ರಗಳ ಸ್ಥಾಪನೆಗಳಿಂದ ದಕ್ಷಿಣ ಭಾಗದಲ್ಲಿ ಭಾರತೀಯ ವಾಯುಪಡೆಯ ಕಾರ್ಯಾಚರಣೆ ಸಾಮಥ್ರ್ಯ ಗಣನೀಯವಾಗಿ ವೃದ್ಧಿಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


