ದೇಶ

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ, ಪೊಲೀಸ್ ಅಧಿಕಾರಿ ಹುತಾತ್ಮ

ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾಕರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ, ಪೊಲೀಸ್ ಅಧಿಕಾರಿ ಹುತಾತ್ಮ
ಭಾರತೀಯ ಯೋಧರು
Published On :

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾಕರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯಂತೆ ರಾಷ್ಟ್ರೀಯ ರೈಫಲ್ಸ್, ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ಕಾರ್ಯಾಚರಣೆ ತಂಡ(ಎಸ್ ಒಜಿ) ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಪುಲ್ವಾಮ ಜಿಲ್ಲೆಯ ಜಂತರಂಗ್ ನಲ್ಲಿ ಇಂದು ಕಾರ್ಯಾಚರಣೆ ಆರಂಭಿಸಿದ್ದವು.

ನಿರ್ದಿಷ್ಟ ಜಾಗದಲ್ಲಿ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಉಳಿದ ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ ತೀವ್ರಗೊಳಿಸಲು ಹೆಚ್ಚುವರಿ ಭದ್ರತಾಪಡೆಗಳು ಸ್ಥಳಕ್ಕೆ ಧಾವಿಸಿವೆ  ಎಂದು ಮೂಲಗಳು ತಿಳಿಸಿವೆ. 

ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇತ್ತೀಚಿನ ವರದಿ ಬಂದಾಗ, ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ಸೋಮವಾರ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‍ನ ಮೂವರು ಉಗ್ರರು ಹತರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.