ಪುಲ್ವಾಮಾ ಎನ್ ಕೌಂಟರ್ , ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳು ಸುಮಾರು 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಿಬ್ಜುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳು ಸುಮಾರು 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಿಬ್ಜುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಗ್ರರು ಅಡಗುವಿಕೆ ಬಗ್ಗೆ ಮಾಹಿತಿ ದೊರೆತ ನಂತರ ಸೇನಾ ರಾಷ್ಟ್ರೀಯ ರೈಫೆಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಗುಂಪು ಪುಲ್ವಾಮದ ಕ್ರೀವ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಕಾರ್ಯಾಚರಣೆ ವೇಳೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಉಗ್ರರು ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಈ ಉಗ್ರರು ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಗೆ ಸೇರಿದವರು ಎಂಬುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.
ನೆರೆಯ ಶೋಫಿಯಾನ್ ಜಿಲ್ಲೆಯಲ್ಲಿ ಸೋಮವಾರ ಇದೇ ರೀತಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


