ತಮಿಳುನಾಡಿನಲ್ಲಿ ಎನ್ ಪಿಆರ್ ಪ್ರಕ್ರಿಯೆಗೆ ಸರ್ಕಾರ ಅವಕಾಶ ನೀಡಬಾರದು- ಸ್ಟಾಲಿನ್
ತಮಿಳುನಾಡಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಡಿಎಂಕೆ ಜನರ ಬಳಿ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಫೆಬ್ರವರಿ 2ರಿಂದ 8ರವರೆಗೂ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು. ಎಲ್ಲಾ ಮೈತ್ರಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭಿಯಾನ ಮುಗಿಸಿದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅವರು ಸುದ್ದಿಗಾರರೊಂದಿಗೆ ತಿಳಿಸಿದರು.
ವಿದ್ಯಾರ್ಥಿಗಳು, ವರ್ತಕರು ಹಾಗೂ ಸಮಾಜದ ಎಲ್ಲಾ ವರ್ಗದ ಜನರು ಸಹಿ ಸಂಗ್ರಹ ಅಭಿಯಾನಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ ಸ್ಟಾಲಿನ್, ಸಿಎಎ ಹಿಂತೆಗೆದುಕೊಳ್ಳುವುದಿಲ್ಲ ಎಂದು ಅಮಿತ್ ಶಾ ಹೇಳುತ್ತಾರೆ ಆದರೆ, ನಾವು ಪ್ರತಿಭಟನೆಯನ್ನು ಮುಂದುವರೆಸುತ್ತೇವೆ. ಸಿಎಎ ವಿಚಾರದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


