ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜಸ್ಥಾನ
ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ.

ಜೈಪುರ್: ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ರಾಜಸ್ಥಾನ ವಿಧಾನಸಭೆಯಲ್ಲಿ ಶನಿವಾರ ನಿರ್ಣಯ ಅಂಗೀಕರಿಸಲಾಗಿದೆ. ಈ ಮೂಲಕ ಪಂಜಾಬ್ ಹಾಗೂ ಕೇರಳ ನಂತರ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದ ಮೂರನೇ ರಾಜ್ಯವಾಗಿದೆ.
ಇಂದು ಬೆಳಗ್ಗೆ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ದಾರಿವಾಲ್ ಅವರು ಸದನದಲ್ಲಿ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು. ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬಿಸಿ ಬಿಸಿ ಚರ್ಚೆಯ ಬಳಿಕ ನಿರ್ಣಯವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ಸಿಎಎ ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕರಿಸಲಾಯಿತು.
ಈವರೆಗೂ ಕೇರಳ ಹಾಗೂ ಪಂಜಾಬ್ ವಿಧಾನಸಭೆಯಲ್ಲಿ ಸಿಎಎ ಕುರಿತ ನಿರ್ಣಯವನ್ನು ಮಾತ್ರ ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಮೂಲವನ್ನೇ ಉಲ್ಲಂಘಿಸಿದೆ. ಇದರಿಂದ ದೇಶದ ಅಪಾರ ಸಂಖ್ಯೆಯ ಜನರು ಭೀತಿಗೊಳಗಾಗಿದ್ದಾರೆ. ಎನ್ ಪಿಆರ್ ಹಾಗೂ ಎನ್ ಆರ್ ಸಿ ಪ್ರಸ್ತಾವನೆಯೂ ಇದೇ ಆಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಎನ್‌ಪಿಆರ್‌ನ ಹೊಸ ನಿಬಂಧನೆಗಳನ್ನು ಹಿಂತೆಗೆದುಕೊಂಡ ನಂತರವೇ ಜನಗಣತಿ ಕಾರ್ಯಗಳನ್ನು ಮಾಡಬೇಕು.ಪೌರತ್ವ ತಿದ್ದುಪಡಿ ಕಾಯ್ದೆಯ ಇತ್ತೀಚಿನ ತಿದ್ದುಪಡಿಗಳು ಜನರನ್ನು ಧಾರ್ಮಿಕ ಆಧಾರದ ಮೇಲೆ ಪ್ರತ್ಯೇಕಿಸುತ್ತವೆ. ಭಾರತದ ಒಂದು ಭಾಗದ ವ್ಯಕ್ತಿಗಳಿಗೆ ಪೌರತ್ವವನ್ನು ಕಸಿದುಕೊಳ್ಳಲು ಇದನ್ನು ರೂಪಿಸಲಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


