ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಇತ್ತೀಚೆಗೆ ನಟ, ರಾಜಕಾರಣಿ ರಜನೀಕಾಂತ್ ಅವರು, ಪೆರಿಯಾರ್ ನಡೆಸಿದ ರ್ಯಾಲಿಯಲ್ಲಿ ಶ್ರೀರಾಮ-ಸೀತಾಮಾತೆಯರ ಬೆತ್ತಲೆ ಚಿತ್ರದ ಮೆರವಣಿಗೆ ಮಾಡಲಾಗಿದ್ದು ಎಂದು ಆರೋಪಿಸಿದ್ದರು. ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆಯೇ ಪ್ರತಿಮೆ ಭಗ್ನ ನಡೆದಿದೆ,
ಪ್ರತಿಮೆ ಭಗ್ನವಾಗಿದ್ದನ್ನು ಜನರು ಗಮನಿಸುತ್ತಿದ್ದಂತೆಯೇ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಅಲ್ಲದೆ, ರಾಜಕೀಯ ಆರೋಪ, ಪ್ರತ್ಯಾರೋಪಗಳೂ ಆರಂಭಗೊಂಡವು. ಈ ಹಿನ್ನೆಲೆಯಲ್ಲಿ ಸಮಾಜ ಘಾತುಕ ಶಕ್ತಿಗಳ ವಿರದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


