ಸಂವಿಧಾನ ಮತ್ತು ಅದರ ಮೌಲ್ಯಗಳ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ: ಸೋನಿಯಾ ಗಾಂಧಿ
ಸಂವಿಧಾನದ ಮೇಲೆ ಪಿತೂರಿ ನಡೆಸಿ ದಾಳಿ ನಡೆಸಲಾಗುತ್ತಿದ್ದು ಅದನ್ನು ರಕ್ಷಿಸಲು ವೈಯಕ್ತಿಕ ಪೂರ್ವಾಗ್ರಹಪೀಡಿತ ಧೋರಣೆಯನ್ನು ಬದಿಗೊತ್ತಿ ಎಲ್ಲರೂ ಒಟ್ಟಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ನವದೆಹಲಿ; ಸಂವಿಧಾನದ ಮೇಲೆ ಪಿತೂರಿ ನಡೆಸಿ ದಾಳಿ ನಡೆಸಲಾಗುತ್ತಿದ್ದು ಅದನ್ನು ರಕ್ಷಿಸಲು ವೈಯಕ್ತಿಕ ಪೂರ್ವಾಗ್ರಹಪೀಡಿತ ಧೋರಣೆಯನ್ನು ಬದಿಗೊತ್ತಿ ಎಲ್ಲರೂ ಒಟ್ಟಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಗಣರಾಜ್ಯೋತ್ಸವ ದಿನದ ಪ್ರಯುಕ್ತ ನೀಡಿರುವ ಸಂದೇಶದಲ್ಲಿ ಅವರು, ಸಂವಿಧಾನವನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದ್ದು ದೇಶದ ಏಕತೆಯನ್ನು ಬಲಪಡಿಸಬೇಕೆಂದರು.
ದೇಶದ ಜನರನ್ನು ಧರ್ಮ, ಸ್ಥಳೀಯವಾದ, ಭಾಷೆಯ ಆಧಾರದ ಮೇಲೆ ವಿಭಜಿಸುವ ಪಿತೂರಿ ಆಳವಾಗಿ ಬೇರೂರಿದ್ದು ಅದು ಸಂವಿಧಾನದ ಆಶಯಕ್ಕೆ ಧಕ್ಕೆಯನ್ನುಂಟುಮಾಡುತ್ತಿದೆ. ದೇಶದ ಜನರಲ್ಲಿ ತೊಂದರೆಯ, ಭೀತಿಯ, ಅಭದ್ರತೆಯ ವಾತಾವರಣ ಕಂಡುಬರುತ್ತಿದೆ ಎಂದರು.
ಇಂದಿನ ಆಡಳಿತ ನಾಯಕರ ಕೈಯಲ್ಲಿ ಸಂವಿಧಾನದ ಮೌಲ್ಯಗಳು ಸುರಕ್ಷಿತವಾಗಿ ಉಳಿದಿಲ್ಲ ಎಂಬ ಅಭಿಪ್ರಾಯಕ್ಕೆ ಸಾಮಾನ್ಯ ಜನರು ಬಂದಿದ್ದಾರೆ.ಇಂತಹ ಸಂದರ್ಭದಲ್ಲಿ ವೈಯಕ್ತಿಕ ಪೂರ್ವಾಗ್ರಹ ಮನಸ್ಥಿತಿಯಿಂದ ಹೊರಬಂದು ರಾಜಕೀಯ ಲಾಭವನ್ನು ಲೆಕ್ಕಿಸದೆ ರಾಷ್ಟ್ರ ನಿರ್ಮಾಣದ ಪ್ರತಿಜ್ಞೆ ಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


