ದೇಶ

ಸಿಎಎ, ಎನ್ ಆರ್ ಸಿ ಪ್ರತಿಭಟನೆ ಪ್ರಧಾನಿ ಮೋದಿ, ಬಿಜೆಪಿ ಜನಪ್ರಿಯತೆಯನ್ನು ಕುಗ್ಗಿಸಿದೆಯೇ? ಇಲ್ಲಿದೆ ಅಚ್ಚರಿಯ ಮಾಹಿತಿ!

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ, ಹಾಗೂ ಎನ್ ಆರ್ ಸಿ ಪ್ರಸ್ತಾವನೆಯನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದವು.

ಸಿಎಎ, ಎನ್ ಆರ್ ಸಿ ಪ್ರತಿಭಟನೆ ಪ್ರಧಾನಿ ಮೋದಿ, ಬಿಜೆಪಿ ಜನಪ್ರಿಯತೆಯನ್ನು ಕುಗ್ಗಿಸಿದೆಯೇ? ಇಲ್ಲಿದೆ ಅಚ್ಚರಿಯ ಮಾಹಿತಿ!
ಸಿಎಎ, ಎನ್ ಆರ್ ಸಿ ಪ್ರತಿಭಟನೆ ಪ್ರಧಾನಿ ಮೋದಿ, ಬಿಜೆಪಿ ಜನಪ್ರಿಯತೆಯನ್ನು ಕುಗ್ಗಿಸಿದೆಯೇ? ಇಲ್ಲಿದೆ ಅಚ್ಚರಿಯ ಮಾಹಿತಿ!
Published On :

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ, ಹಾಗೂ ಎನ್ ಆರ್ ಸಿ ಪ್ರಸ್ತಾವನೆಯನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದವು.

ಈ ಪರಿಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದರೂ ಸಹ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಜನಪ್ರಿಯತೆಗೆ ಧಕ್ಕೆಯಾಗಿಲ್ಲ ಎಂದು ಸಮೀಕ್ಷೆಯೊಂದು ಹೇಳಿದೆ.

ಐಎಎನ್ಎಸ್-ಸಿ-ವೋಟರ್ ನಡೆಸಿರುವ ಸಮೀಕ್ಷೆಯ ಪ್ರಕಾರ ಸಮೀಕ್ಷೆಗೆ ಪ್ರತಿಕ್ರಿಯೆ ನೀಡಿರುವವರ ಪೈಕಿ ಬಹುತೇಕ ಮಂದಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಆಡಳಿತದ ಬಗ್ಗೆ ಸಂತಸವಿದೆ ಎಂದು ಹೇಳಿದ್ದಾರೆ. ಸ್ಟೇಟ್ ಆಫ್ ನೇಷನ್ ನಲ್ಲಿ ಸಮೀಕ್ಷೆಯ ವಿವರಗಳು ಪ್ರಕಟವಾಗಿದ್ದು, ಶೇ.56.4 ರಷ್ಟು ಮಂದಿ, ಸಿಎಎ ಪ್ರತಿಭಟನೆಗಳ ಹೊರತಾಗಿಯೂ ಸಹ ಬಿಜೆಪಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೂ ಶೇ.62.3 ರಷ್ಟು ಮಂದಿ ಪ್ರಧಾನಿ ಮೋದಿ ಆಡಳಿತ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.