ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇಶದ ಪ್ರತೀಯೊಬ್ಬ ಪ್ರಜೆಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್! ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ರಾಜಧಾನಿ ದೆಹಲಿಯ ರಾಜ್ ಪಥ್ ನಲ್ಲಿ ಬೆಳಿಗ್ಗೆ 7 ರಿಂದ 11.30ರವರೆಗೆ ಪಥಸಂಚಲನ ನಡೆಯಲಿದೆ. ಭವ್ಯ ಸಮಾರಂಭದಲ್ಲಿ ಬ್ರೆಜಿಲ್ ರಾಷ್ಟ್ರದ ಅಧ್ಯಕ್ಷ ಜೈರ್ ಬೋಲ್ಸನಾರೋ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


