ಶಾಹೀನ್ ಬಾಗ್ ಸ್ಪೂರ್ತಿ, ಮುಂಬೈಯಲ್ಲಿ ಸಿಎಎ ವಿರೋಧಿಸಿ ಮಹಿಳೆಯರ ಪ್ರತಿಭಟನೆ
ನವದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ಸ್ಪೂರ್ತಿ ಪಡೆದು ಸಿಎಎ-ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರೋಧಿಸಿ ದಕ್ಷಿಣ ಮುಂಬೈಯ ನಾಗ್ ಪದ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ನೂರಾರು ಸಂಖ್ಯೆಯ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಂಬೈ: ನವದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ಸ್ಪೂರ್ತಿ ಪಡೆದು ಸಿಎಎ-ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರೋಧಿಸಿ ದಕ್ಷಿಣ ಮುಂಬೈಯ ನಾಗ್ ಪದ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ನೂರಾರು ಸಂಖ್ಯೆಯ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅರಬಿಯಾ ಹೋಟೆಲ್ ನ ಹೊರಗಡೆ ಮೊರ್ ಲ್ಯಾಂಡ್ ರಸ್ತೆಯಲ್ಲಿ ಕಳೆದ ರಾತ್ರಿಯಿಂದಲೂ ಕೈಯಲ್ಲಿ ಫಲಕಗಳನ್ನು ಹಿಡಿದು ಕುಳಿತಿರುವ ಮಹಿಳಾ ಪ್ರತಿಭಟನಾಕಾರರು, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ವರದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಹುತೇಕ ಮಹಿಳೆಯರು ಮುಸ್ಲಿಂ ಪ್ರಾಬಲ್ಯದ ಮಾದನ್ ಪುರ, ಜೊಲಾ ಮೈದಾನ, ಅಪ್ರಿಪಾದ ಮತ್ತು ಮಧ್ಯ ಮುಂಬೈ ಪ್ರದೇಶದವರಾಗಿದ್ದಾರೆ.
ಪ್ರತಿಭಟನೆ ಹಿಂಪಡೆಯುವಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಮನವೊಲಿಕೆಗೂ ಬಗ್ಗದ ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯಲು ನಿರಾಕರಿಸದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ಬೆಳಗ್ಗೆ ತಿಳಿಸಿದ್ದಾರೆ.
ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಾಗೂ ಶಾಹೀನ್ ಬಾಗ್ ಬಳಿ ಡಿಸೆಂಬರ್ 15 ರಂದು ಇದೇ ರೀತಿಯ ಪ್ರತಿಭಟನೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


