ದೇಶ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್ ನೆಲಸಮ: ಬಿಜೆಪಿ ಸಂಸದ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್'ನ್ನು ನೆಲಸಮ ಮಾಡಲಾಗುತ್ತದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಮಂಗಳವಾರ ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್ ನೆಲಸಮ: ಬಿಜೆಪಿ ಸಂಸದ
ಬಿಜೆಪಿ ಸಂಸದ ಪರ್ವೇಶ್ ವರ್ಮಾ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಒಂದು ಗಂಟೆಯಲ್ಲಿ ಶಹೀನ್ ಬಾಗ್'ನ್ನು ನೆಲಸಮ ಮಾಡಲಾಗುತ್ತದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಮಂಗಳವಾರ ಹೇಳಿದ್ದಾರೆ. 

ವಿಕಾಸ್ಪುರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಫೆಬ್ರವರಿ 11 ರಂದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದೇ ಆದರೆ, ಶಹೀನ್ ಬಾಗ್'ನ ಎಲ್ಲಾ ಪ್ರತಿಭಟನಾಕಾರರನ್ನು ಗಂಟೆಗಳಲ್ಲಿ ಓಡಿಸುತ್ತೇವೆ. ಒಬ್ಬೇ ಒಬ್ಬ ಪ್ರತಿಭಟನಾಕಾರನೂ ಕೂಡ ಶಾಹೀನ್ ಬಾಗ್ ನಲ್ಲಿ ಉಳಿದಿರುವುದಿಲ್ಲ ಎಂದು ಹೇಳಿದ್ದಾರೆ. 

ಶಾಹೀನ್ ಬಾಗ್ ನಲ್ಲಿ ಲಕ್ಷಾಂತರ ಜನರಿದ್ದಾರೆ. ದೆಹಲಿ ಈ ಬಗ್ಗೆ ಚಿಂತನೆ ನಡೆಸಿ, ನಿರ್ಧಾರ ಕೈಗೊಳ್ಳಬೇಕು. ಶಹೀನ್ ಬಾಗ್ ನಲ್ಲಿ ಹಬ್ಬಿರುವ ಪ್ರತಿಭಟನೆಯ ಬೆಂಕಿ ನಿಮ್ಮ ಮನೆಯನ್ನೂ ತಲುಪಬಹುದು. ನಿಮ್ಮ ಅಕ್ಕ-ತಂಗಿಯರು, ಮಕ್ಕಳ ಮೇಲೂ ಅವರು ಅತ್ಯಾಚಾರ ನಡೆಸಬಹುದು. ನಿಮಗೆ ಏನು ಬೇಕೆಂದು ಆಯ್ಕೆ ಮಾಡಿಕೊಳ್ಳಲು ಇದು ಸೂಕ್ತ ಸಮಯ. ಇದೀಗ ನೀವು ಎಚ್ಚೆತ್ತುಕೊಳ್ಳದಿದ್ದರೆ, ನಾಳೆ ಮೋದಿ, ಅಮಿತ್ ಶಾ ಯಾರೂ ನಿಮ್ಮನ್ನು ಕಾಪಾಡಲು ಸಾಧ್ಯವಿಲ್ಲ ಎಂದು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.