ನೀತಿ ಸಂಹಿತೆ ಉಲ್ಲಂಘನೆ: 48 ಗಂಟೆಗಳ ಕಾಲ ಶಾ ಪ್ರಚಾರ ನಿಷೇಧಿಸುವಂತೆ ಎಎಪಿ ದೂರು
ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನವದೆಹಲಿ: ಅವಹೇನಕಾರಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ದ ಆಮ್ ಆದ್ಮಿ ಪಕ್ಷ (ಎಎಪಿ) ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಎಎಪಿ ಸರ್ಕಾರ ದೆಹಲಿಯ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಲು ಏನೂ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಶಾ ಮತ್ತು ಇತರ ಸಂಸದರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಪಂಕಜ್ ಗುಪ್ತ ದೂರಿನಲ್ಲಿ ಆರೋಪಿಸಿದ್ದಾರೆ.
ಅಮಿತ್ ಶಾ ಮತ್ತಿತರರು ಅತ್ಯಂತ ವ್ಯವಸ್ಥಿತವಾಗಿ ಅರವಿಂದ ಕೇಜ್ರೀವಾಲ್, ಮನೀಶ್ ಸಿಸೋಡಿಯಾ ಮತ್ತಿತರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಒಳಗೊಂಡಿರುವ ವಿಡಿಯೋಗಳನ್ನು ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಪಕ್ಷದ ಸಂಸದರು ಸೇರಿದಂತೆ ಇತರರು ದೊಡ್ಡ ಪ್ರಮಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


