ದೇಶ

ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಬಗ್ಗೆ ರಕ್ಷಣಾತ್ಮಕವಾಗಿರುವುದು ಬೇಡ, ಬಲವಾಗಿ ಸಮರ್ಥಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ನಾಯಕರಿಗೆ ಸೂಚನೆ ನೀಡಿದ್ದಾರೆ.

ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ
ರಕ್ಷಣಾತ್ಮಕವಾಗಿರುವುದು ಬೇಡ, ಸಂಸತ್ ನಲ್ಲಿ ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಳ್ಳಿ: ಎನ್ ಡಿಎ ನಾಯಕರಿಗೆ ಪ್ರಧಾನಿ
Published On :

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಬಗ್ಗೆ ರಕ್ಷಣಾತ್ಮಕವಾಗಿರುವುದು ಬೇಡ, ಬಲವಾಗಿ ಸಮರ್ಥಿಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ನಾಯಕರಿಗೆ ಸೂಚನೆ ನೀಡಿದ್ದಾರೆ. 

ಸಂಸತ್ ಅಧಿವೇಶನದಲ್ಲಿ ಸಿಎಎ ವಿರುದ್ಧ ಪ್ರತಿಪಕ್ಷಗಳ ಟೀಕೆಗಳಿಗೆ ಆಕ್ರಮಣಕಾರಿಯಾಗಿ ಉತ್ತರ ನೀಡುವಂತೆ ಎನ್ ಡಿಎ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಹಾಗೂ ನಮಗೆ ಅಲ್ಪಸಂಖ್ಯಾತರು ದೇಶದ ಇತರ ನಾಗರಿಕರಂತೆಯೇ ಎಂದು ಹೇಳಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರಿಸಲು ಪ್ರತಿತಂತ್ರ ಹೆಣೆಯುವುದಕ್ಕಾಗಿ ಎನ್ ಡಿಎ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಮೋದಿ ಎನ್ ಡಿಎ ನಾಯಕರಿಗೆ ಸಲಹೆ ನೀಡಿದ್ದಾರೆ. 

ಸಿಎಎಗೆ ಸಂಬಂಧಪಟ್ಟಂತೆ ಸರ್ಕಾರ ಯಾವುದೇ ತಪ್ಪನ್ನೂ ಮಾಡಿಲ್ಲ. ಅದರ ಬಗ್ಗೆ ರಕ್ಷಣಾತ್ಮಕವಾಗಿ ನಡೆದುಕೊಳ್ಳುವ ಅಗತ್ಯವಿಲ್ಲ ಎಂಬುದು ಮೋದಿ ಅಭಿಪ್ರಾಯವಾಗಿದೆ. ಬೋಡೋ ಅಕಾರ್ಡ್​​ಗೆ ಸಹಿ ಹಾಗೂ ತ್ರಿಪುರಾದ ಬ್ರು ಬುಡಕಟ್ಟು ಸಮಸ್ಯೆಗಳನ್ನು ಪರಿಹರಿಸಿದ್ದಕ್ಕಾಗಿ ಎನ್ ಡಿಎ ನಾಯಕರು ಪ್ರಧಾನಿ ಮೋದಿ ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.