ದೇಶ

ಕೋವಿಡ್-19: ಒಂದೇ ದಿನ 18,653 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5.85 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,653 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ಒಂದೇ ದಿನ 18,653 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5.85 ಲಕ್ಷಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,653 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ ಮಹಾಮಾರಿ ವೈರಸ್ ಬರೋಬ್ಬರಿ 507 ಮಂದಿಯನ್ನು ಬಲಿಪಡೆದುಕೊಂಡಿದ್ದು, ಈ ವರೆಗೂ ವೈರಸ್'ನಿಂದ ಸಾವನ್ನಪ್ಪಿದವರ ಸಂಖ್ಯೆ 17,400ಕ್ಕೆ ತಲುಪಿದೆ. 

ಇನ್ನು 5,85,493 ಮಂದಿ ಸೋಂಕಿತರ ಪೈಕಿ 3,47,979 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 2,20,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

ಈ ನಡುವೆ ತಮಿಳುನಾಡು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 90,167ಕ್ಕೆ ಏರಿಕೆಯಾಗಿದ್ದು, 1,201 ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. 

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,17,931 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,17,931 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜೂನ್ 30ರವರೆಗೂ 86,26,585 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.