33 ಯುದ್ಧ ವಿಮಾನಗಳು, ಕ್ಷಿಪಣಿ ವ್ಯವಸ್ಥೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ
ಭಾರತೀಯ ಸೇನೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 33 ಯುದ್ಧ ವಿಮಾನ, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಒಟ್ಟು 38, 900 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಗುರುವಾರ ಅನುಮತಿ ನೀಡಿದೆ.

ನವದೆಹಲಿ: ಭಾರತೀಯ ಸೇನೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 33 ಯುದ್ಧ ವಿಮಾನ, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಒಟ್ಟು 38, 900 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಗುರುವಾರ ಅನುಮತಿ ನೀಡಿದೆ.
ಇಂದು ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ 21 ಮಿಗ್-29ಎಸ್ ಹಾಗೂ 12 ಸುಖೋಯ್-30 ಎಂಕೆಐ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸಚಿವಾಲಯ ಅನುಮತಿ ನೀಡಿದೆ.
21 ಮಿಗ್-29ಎಸ್ ಯುದ್ಧ ವಿಮಾನಗಳನ್ನು ರಷ್ಯಾದಿಂದ ಭಾರತ ಖರೀದಿಸುತ್ತಿದ್ದು, ಇದಕ್ಕಾಗಿ ಸರಕಾರ 7,418 ಕೋಟಿ ವ್ಯಯಿಸಲಿದೆ. ಅಲ್ಲದೇ ರಷ್ಯಾದಿಂದಲೇ ಸದ್ಯ ಸೇನೆಯಲ್ಲಿರುವ ಮಿಗ್-29 ವಿಮಾನಗಳನ್ನ ನವೀಕರಿಸಲು ನಿರ್ಧರಿಸಲಾಗಿದೆ.
ಇನ್ನು ಸುಖೋಯ್-30 ಎಂಕೆಐ ಯುದ್ಧ ವಿಮಾನಗಳನ್ನ ಬೆಂಗಳೂರಿನ ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್‌ನಿಂದ ರಕ್ಷಣಾ ಇಲಾಖೆ ಖರೀದಿಸಲಿದೆ. ಇದಕ್ಕಾಗಿ ಸರ್ಕಾರ 10,730 ಕೋಟಿ ವ್ಯಯಿಸಲಿದೆ.
ಇನ್ನು ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಕ್ಷಣಾ ಸಚಿವಾಲಯ ದೇಶದ ಗಡಿ ಭದ್ರತೆ ಸರ್ಕಾರಕ್ಕೆ ಅತೀ ಮುಖ್ಯವಾಗಿದ್ದು ವಾಯು ಸೇನೆಗೆ ಬಲ ತುಂಬುವ ನಿಟ್ಟಿನಲ್ಲಿ ಯುದ್ಧ ವಿಮಾನಗಳನ್ನ ಖರೀದಿಸಲು ಸರ್ಕಾರ ಸೂಚಿಸಿತ್ತು. ಈ ಹಿನ್ನೆಲೆ ಸಭೆಯಲ್ಲಿ ಖರೀದಿಸುವ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


