ದೇಶ

ಆಗಸ್ಚ್ 15ರೊಳಗೆ ಭಾರತದ ಮೊಟ್ಟ ಮೊದಲ ಕೊರೋನಾ ವೈರಸ್ ಲಸಿಕೆ 'ಕೊವ್ಯಾಕ್ಸಿನ್' ಮಾನವ ಪ್ರಯೋಗ ಫಲಿತಾಂಶ ಪ್ರಕಟ

ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ 'ಕೋವಾಕ್ಸಿನ್' ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡುವಂತೆ ಐಸಿಎಂಆರ್ ದೇಶದ 12 ಪ್ರಮುಖ ಆಸ್ಪತ್ರೆಗಳಿಗೆ ಶುಕ್ರವಾರ ಸೂಚನೆ ನೀಡಿದೆ.

ಆಗಸ್ಚ್ 15ರೊಳಗೆ ಭಾರತದ ಮೊಟ್ಟ ಮೊದಲ ಕೊರೋನಾ ವೈರಸ್ ಲಸಿಕೆ 'ಕೊವ್ಯಾಕ್ಸಿನ್' ಮಾನವ ಪ್ರಯೋಗ ಫಲಿತಾಂಶ ಪ್ರಕಟ
ಸಂಗ್ರಹ ಚಿತ್ರ
Published On :

ದೇಶೀಯ ಲಸಿಕೆ 'ಕೋವಾಕ್ಸಿನ್' ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡಿ: ದೇಶದ 12 ಪ್ರಮುಖ ಆಸ್ಪತ್ರೆಗಳಿಗೆ ಐಸಿಎಂಆರ್ ಸೂಚನೆ

ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ 'ಕೋವಾಕ್ಸಿನ್' ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡುವಂತೆ ಐಸಿಎಂಆರ್ ದೇಶದ 12 ಪ್ರಮುಖ  ಆಸ್ಪತ್ರೆಗಳಿಗೆ ಶುಕ್ರವಾರ ಸೂಚನೆ ನೀಡಿದೆ. 

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ನ್ಯಾಷನಲ್ ಇನ್'ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಕಂಪನಿ ಈ ಲಸಿಕೆಯನ್ನು ತಯಾರಿಸಿದ್ದು, ಇದೀಗ ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಕಂಪನಿ ಆಗಸ್ಟ್ 15 ರಂದು ಈ ಔಷಧಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಪ್ರಕಟಣೆ ಹೊರಡಿಸಿರುವ ಐಸಿಎಂಆರ್, ಫಾಸ್ಟ್ ಟ್ರಾಕ್ ಟ್ರಯಲ್ ನಡೆಸಲು ನಿರ್ಧರಿಸಿದ್ದು, ಜೂಲೈ7ರಿಂದ ಕ್ಲಿನಿಕಲ್ ಟ್ರಯಲ್ ಶುರುವಾಗಲಿದೆ ಎಂದು ತಿಳಿಸಿದೆ. 

ಭಾರತ ಅಭಿವೃದ್ಧಿಪಡಿಸಿದ ಮೊದಲ ಸ್ಥಳೀಯ ಲಸಿಕೆ ಇದಾಗಿದ್ದು, ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಪುಣೆ ವೈರಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಭಾರತ್ ಬಯೋಟೆಕ್ ಇಂಟರ್ ನ್ಯಾಷನಲ್ ಲಿಮಿಟೆಡ್ ಈ ಲಸಿಕೆ ಅಭಿವೃದ್ಧಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ದೇಶದ 12 ಪ್ರಮುಖ ಆಸ್ಪತ್ರೆಗಳಲ್ಲಿ ಈ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳಿಗೆ ತುರ್ತು ಅನುಮೋದನೆ ನೀಡುವಂತೆಯೂ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.