ದೇಶ

ಮುಂಬೈನಲ್ಲಿ ಮತ್ತೆ 1554 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 80,262ಕ್ಕೆ ಏರಿಕೆ

ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ನಿನ್ನೆ 1554 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,262 ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ ಮತ್ತೆ 1554 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 80,262ಕ್ಕೆ ಏರಿಕೆ
ಧಾರಾವಿಯಲ್ಲಿ ಸ್ಕ್ರೀನಿಂಗ್ (ಏಪಿ ಚಿತ್ರ)
Published On :

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ನಿನ್ನೆ 1554 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,262 ಕ್ಕೆ ಏರಿಕೆಯಾಗಿದೆ. 

ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ಮುಂಬೈನಲ್ಲಿ 1554 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 80,262ಕ್ಕೆ ಏರಿಕೆಯಾಗಿದೆ. ಈ ಪೈಕಿ ನಿನ್ನೆ ಒಂದಿನ 5903ಸೋಂಕಿತರು ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದ ಸೋಂಕಿತರ ಸಂಖ್ಯೆ   50.694‬ ಸೋಂಕಿತರು ಗುಣಮುಖರಾಗಿದ್ದು, 24882  ಸಕ್ರಿಯ ಪ್ರಕರಣಗಳಿವೆ. 

ಇನ್ನು ನಿನ್ನೆ 57 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ  4686 ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.

ಧಾರಾವಿಯಲ್ಲಿ ಮತ್ತೆ 19 ಹೊಸ ಸೋಂಕು ಪ್ರಕರಣ
ಇನ್ನು ಏಷ್ಯಾದ ಅತೀ ದೊಡ್ಡ ಕೊಳಚೆ ಪ್ರದೇಶವೆಂದೇ ಹೇಳಲಾಗುವ ಮುಂಬೈನ ಧಾರಾವಿಯಲ್ಲಿ ನಿನ್ನೆ ಮತ್ತೆ 19 ಮಂದಿ ನಿವಾಸಿಗಳಲ್ಲಿ ಕೊರೋನಾ ಸೋಂಕು ದೃಢವಾಗಿದೆ. ಆ ಮೂಲಕ ಧಾರಾವಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,301ಕ್ಕೆ ಏರಿಕೆಯಾಗಿದೆ. ಅಂತೆಯೇ ಇಲ್ಲಿ551 ಸಕ್ರಿಯ ಪ್ರಕರಣಗಳಿದ್ದು, 1,664 ಸೋಂಕಿತರು ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.