ದೇಶ

ಲಡಾಖ್ ಗಡಿಯಲ್ಲಿ ಚೀನಾ ಕ್ಯಾತೆ: ಭಾರತದ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದ ಜಪಾನ್

ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಭಾರತಕ್ಕೆ ಗರಿಷ್ಠ ಬೆಂಬಲ ಸೂಚಿಸಿರುವ ಜಪಾನ್ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಯಾವುದೇ "ಏಕಪಕ್ಷೀಯ" ಪ್ರಯತ್ನಕ್ಕೆ ತನ್ನ ಪ್ರಬಲ ವಿರೋಧವಿದೆ ಎಂದು ಹೇಳಿದೆ.

ಲಡಾಖ್ ಗಡಿಯಲ್ಲಿ ಚೀನಾ ಕ್ಯಾತೆ: ಭಾರತದ ನಿಲುವಿಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದ ಜಪಾನ್
Published On :

ಟೋಕಿಯೋ: ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿ ಭಾರತಕ್ಕೆ ಗರಿಷ್ಠ ಬೆಂಬಲ ಸೂಚಿಸಿರುವ ಜಪಾನ್ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಯಾವುದೇ "ಏಕಪಕ್ಷೀಯ" ಪ್ರಯತ್ನಕ್ಕೆ ತನ್ನ ಪ್ರಬಲ ವಿರೋಧವಿದೆ ಎಂದು ಹೇಳಿದೆ.

ವಿದೇಶಾಂಗ ಕಾರ್ಯದರ್ಶಿಹರ್ಷವರ್ಧನ್ ಶ್ರೀರಂಗ ಅವರೊಂದಿಗಿನ ಸಭೆಯ ನಂತರ, ಜಪಾನ್ ರಾಯಭಾರಿ ಸತೋಶಿ ಸುಜುಕಿ ಮಾತನಾಡಿ, ಮಾತುಕತೆಯ ಮೂಲಕ ವಿವಾದವು ಶಾಂತಿಯುತವಾಗಿ ಬಗೆಹರಿಯಲಿದೆ ಎಂದು ಜಪಾನ್ ಆಶಿಸುತ್ತದೆ ಎಂದಿದ್ದಾರೆ.

"ವಿದೇಶಾಂಗ ಕಾರ್ಯದರ್ಶಿಗಳೊಂದಿಗಿನ ಉನ್ನತ ಮಟ್ಟದ ಫಲಪ್ರದ ಮಾತುಕತೆ ಬಳಿಕ ಭಾರತ ಸರ್ಕಾರ ಎಲ್ ಎಸಿ ಸಂಘರ್ಷದ ನಂತರ ತೆಗೆದುಕೊಂಡ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ.  ಅಲ್ಲದೆ ಎರಡೂ ರಾಷ್ಟ್ರಗಳ ನಡುವೆ ಮಾತುಕತೆಯ ಮೂಲಕ ವಿವಾದವು ಕೊನೆಗಾಣಲಿದೆ ಎಂದು ನಮ್ಮ ರಾಷ್ಟ್ರ  ಆಶಿಸುತ್ತದೆ" ಜಪಾನ್ ರಾಯಭಾರಿ ಟ್ವೀಟ್ ಮಾಡಿದ್ದಾರೆ. 

ಕಳೆದ ಏಳು ವಾರಗಳಿಂದ ಪೂರ್ವ ಮತ್ತು ಲಡಾಕ್‌ನ ಅನೇಕ ಸ್ಥಳಗಳಲ್ಲಿ ಭಾರತೀಯ ಮತ್ತು ಚೀನೀ ಸೈನ್ಯಗಳು ಪರಸ್ಪರ ಕಾದಾಟದಂತ ಸನ್ನಿವೇಶವನ್ನು ಸೃಷ್ಟಿ ಮಾಡುತ್ತಿದೆ. ಜೂನ್ 15ರಂದು ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಈ ಬೆಳವಣಿಗೆಗೆ ತೀವ್ರ ಸ್ವರೂಪ ಸಿಕ್ಕಿತ್ತು. 

ಸಧ್ಯ ಈ ಪ್ರದೇಶದಲ್ಲಿ ಶಾಂತಿ ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಪೂರ್ವ ಲಡಾಕ್‌ನ ಎಲ್ಲಾ ಪ್ರದೇಶಗಳಲ್ಲಿ ಯಥಾಸ್ಥಿತಿ ಪುನಃಸ್ಥಾಪಿಸಲು ಭಾರತ ಒತ್ತಾಯಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.