ಕುಲ್ಗಾಮ್: ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಹಿಜ್ಬುಲ್ ಉಗ್ರರಿಗೆ ಕೋವಿಡ್-19 ಪಾಸಿಟಿವ್
ಜಮ್ಮು-ಕಾಶ್ಮೀರದ ಕಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಜೊತೆಗಿನ ಎನ್ ಕೌಂಟರ್ ನಲ್ಲಿ ಮೃತರಾದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಕುಲ್ಗಾಮ್: ಜಮ್ಮು-ಕಾಶ್ಮೀರದ ಕಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಜೊತೆಗಿನ ಎನ್ ಕೌಂಟರ್ ನಲ್ಲಿ ಮೃತರಾದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ವೈದ್ಯಕೀಯ ಕಾನೂನು ಶಿಷ್ಟಾಚಾರದಂತೆ ಇಬ್ಬರು ಉಗ್ರರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ ನ ಅರ್ರಾ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಉಗ್ರರು ಮೃತಪಟ್ಟಿದ್ದರು.ಗುಂಡಿನ ಕಾಳಗದ ವೇಳೆಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಗಾಯಗೊಂಡಿದ್ದರು.
ಕೋವಿಡ್-19 ಶಿಷ್ಟಾಚಾರದಂತೆ ಸೂಕ್ತ ರೀತಿಯಲ್ಲಿ ಮೃತರ ಮೃತದೇಹಗಳನ್ನು ಬಾರಮುಲ್ಲಾ ಜಿಲ್ಲೆಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಇಬ್ಬರು ಉಗ್ರರ ಪೈಕಿ ಒಬ್ಬರು ವಿದೇಶಿ ಪ್ರಜೆಯಾಗಿದ್ದು, ಅಲಿ ಬಾಯ್ ಆಲಿಯಾಸ್ ಹೈದರ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರನ್ನು ಈವರೆಗೂ ಗುರುತಿಸಲು ಸಾಧ್ಯವಾಗಿಲ್ಲ. ಮೃತರ ಮರಣೋತ್ತರ ಪರೀಕ್ಷೆ, ಡಿಎನ್ ಎ, ಕೋವಿಡ್-19 ಪರೀಕ್ಷೆಗಳೆಲ್ಲಾವೂ ಶಿಷ್ಟಾಚಾರದಂತೆ ನಡೆದಿರುವುದಾಗಿ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


